HomeKarnatakaಸಿದ್ದರಾಮಯ್ಯ ರಾಜೀನಾಮೆ ನೀಡಿದರೆ ಮುಂದಿನ ಸಿಎಂ ಸತೀಶ್ ಜಾರಕಿಹೊಳಿ; ಅಭಿಮಾನಿಗಳ ಪೋಸ್ಟರ್ ಅಭಿಯಾನ

ಸಿದ್ದರಾಮಯ್ಯ ರಾಜೀನಾಮೆ ನೀಡಿದರೆ ಮುಂದಿನ ಸಿಎಂ ಸತೀಶ್ ಜಾರಕಿಹೊಳಿ; ಅಭಿಮಾನಿಗಳ ಪೋಸ್ಟರ್ ಅಭಿಯಾನ

ಬೆಂಗಳೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರ ಭಾರಿ ಸದ್ದು ಮಾಡುತ್ತಿದೆ. ಈ ನಡುವೆ ಸಿಎಂ ಹುದ್ದೆಯ ಆಕಾಂಕ್ಷಿಗಳ ಸಂಖ್ಯೆಯೂ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಒಂದು ವೇಳೆ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಿದರೆ ಸತೀಶ್ ಜಾರಕಿಹೊಳಿ ಮುಂದಿನ ಮುಖ್ಯಮಂತ್ರಿಯಾಗಲಿ ಎಂದು ಅಭಿಮಾನಿಗಳು ಪೋಸ್ಟರ್ ಅಭಿಯಾನ ಆರಂಭಿಸಿದ್ದಾರೆ.

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಕೆಲ ದಿನಗಳ ಹಿಂದೆ ದೆಹಲಿಗೆ ತೆರಳಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರನ್ನು ಭೇಟಿಯಾಗಿದ್ದರು. ಹೈಕಮಾಂಡ್ ನಾಯಕರನ್ನೂ ಭೇಟಿಯಾಗಿದ್ದರು. ಈ ಬೆಳವಣಿಗೆ ಬೆನ್ನಲ್ಲೇ ಸತೀಶ್ ಜಾರಕಿಹೊಳಿ ಮುಂದಿನ ಸಿಎಂ ಕೂಗು ಕೇಳಿಬರುತ್ತಿದೆ.

ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟರ್ ಅಭಿಯಾನ ಆರಂಭಿಸಿರುವ ಸತೀಶ್ ಜಾರಕಿಹೊಳಿ ಅಭಿಮಾನಿಗಳು, ಸಿಎಂ ಸಿದ್ದರಾಮಯ್ಯನವರು ರಾಜೀನಾಮೆ ನೀಡಿದರೆ ಮುಂದಿನ ಮುಖ್ಯಮಂತ್ರಿಯಾಗಿ ನಮ್ಮ ಬೆಳಗಾವಿಯ ಸತೀಶ್ ಜಾರಕಿಹೊಳಿ ಅಧಿಕಾರ ಸ್ವೀಕರಿಸಲಿ ಎಂದು ಹೇಳಿದ್ದಾರೆ. ಮುಂದಿನ ಸಿಎಂ ಸತೀಶ್ ಜಾರಕಿಹೊಳಿ ಬಹುತೇಕ ಫಿಕ್ಸ್ ಎಂಬ ಪೋಸ್ಟರ್ ಗಳು ವೈರಲ್ ಆಗುತ್ತಿವೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular