HomeIndiaSHOCKING: ಯೂಟ್ಯೂಬ್ ನೋಡಿ ನಕಲಿ ವೈದ್ಯನಿಂದ ಶಸ್ತ್ರಚಿಕಿತ್ಸೆ: 15 ವರ್ಷದ ಬಾಲಕ ಸಾವು

SHOCKING: ಯೂಟ್ಯೂಬ್ ನೋಡಿ ನಕಲಿ ವೈದ್ಯನಿಂದ ಶಸ್ತ್ರಚಿಕಿತ್ಸೆ: 15 ವರ್ಷದ ಬಾಲಕ ಸಾವು

ಬಿಹಾರದ ಸರನ್ ಜಿಲ್ಲೆಯಲ್ಲಿ ಯೂಟ್ಯೂಬ್ ನೋಡಿಕೊಂಡು ನಕಲಿ ವೈದ್ಯ ಶಸ್ತ್ರಚಿಕಿತ್ಸೆ ಮಾಡಿದ್ದು, 15 ವರ್ಷದ ಬಾಲಕ ಸಾವನ್ನಪ್ಪಿದ್ದಾನೆ.

ಅಜಿತ್ ಕುಮಾರ್ ಪುರಿ ಎಂದು ಗುರುತಿಸಲಾದ ನಕಲಿ ವೈದ್ಯ ಮಾಡಿದ ಪಿತ್ತಕೋಶದ ಕಲ್ಲಿನ ಶಸ್ತ್ರಚಿಕಿತ್ಸೆಯ ನಂತರ 15 ವರ್ಷದ ಬಾಲಕ ಪ್ರಾಣ ಕಳೆದುಕೊಂಡಿದ್ದಾನೆ. ಕಾರ್ಯವಿಧಾನಕ್ಕೆ ಮಾರ್ಗದರ್ಶನ ನೀಡಲು ಯೂಟ್ಯೂಬ್ ವೀಡಿಯೊಗಳನ್ನು ಅವಲಂಬಿಸಿದ್ದ ವೈದ್ಯ ಈಗ ಓಡಿಹೋಗಿದ್ದಾನೆ.

ಶುಕ್ರವಾರ ರಾತ್ರಿ ವಾಂತಿ ಮತ್ತು ತೀವ್ರ ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಬಾಲಕನನ್ನು ಮಧುರಾದಲ್ಲಿರುವ ಅಜಿತ್ ಕುಮಾರ್ ಪುರಿಯ ಕ್ಲಿನಿಕ್‌ ಗೆ ದಾಖಲಿಸಲಾಗಿತ್ತು. ಹುಡುಗನ ಕುಟುಂಬದ ಒಪ್ಪಿಗೆಯಿಲ್ಲದೆ ಬಾಲಕನಿಗೆ ಶಸ್ತ್ರಚಿಕಿತ್ಸೆ ಮಾಡಲು ಪ್ರಾರಂಭಿಸಿದ ಅಜಿತ್ ಕುಮಾರ್ ಈ ವೇಳೆ ಮೊಬೈಲ್ ನಲ್ಲಿ ಯೂಟ್ಯೂಬ್ ವೀಡಿಯೊಗಳನ್ನು ನೋಡಿ ಅವುಗಳನ್ನು ಅನುಸರಿಸಿ ಶಸ್ತ್ರಚಿಕಿತ್ಸೆ ಮಾಡಿದ್ದಾನೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಾಲಕನ ಪೋಷಕರು ಪ್ರಶ್ನಿಸಿದಾಗ ಡಾಕ್ಟರ್ ನಾನೋ, ನೀವೋ ಎಂದು ಮರು ಪ್ರಶ್ನಿಸಿ ಸುಮ್ಮನಿರಿಸಿದ್ದಾನೆ. ಬಾಲಕನ ಆರೋಗ್ಯ ಸ್ಥಿತಿ ಹದಗೆಟ್ಟಿದ್ದು, ಪರಿಸ್ಥಿತಿ ಗಂಭೀರವಾಗಿದೆ. ಪೋಷಕರು ಬಾಲಕನನ್ನು ಪಾಟ್ನಾದ ಆಸ್ಪತ್ರೆಗೆ ಸಾಗಿಸಲು ಪ್ರಯತ್ನಿಸಿದ್ದಾರೆ. ಆದರೆ, ಮಾರ್ಗಮಧ್ಯೆ ಯುವಕ ಮೃತಪಟ್ಟಿದ್ದಾನೆ. ಬಾಲಕನ ಸಾವಿನ ನಂತರ ಪುರಿ ಸ್ಥಳದಿಂದ ಪರಾರಿಯಾಗಿದ್ದಾನೆ,

ಕುಟುಂಬದವರು ಪೊಲೀಸ್ ದೂರು ದಾಖಲಿಸಿದ್ದಾರೆ. ಅಧಿಕಾರಿಗಳು ನಕಲಿ ವೈದ್ಯ ಮತ್ತು ಅವರ ಕ್ಲಿನಿಕ್ ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಬಾಲಕನ ಮೃದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular