HomeKarnatakaಇಂದಿನಿಂದ ಮೂರು ದಿನ ಭಾರಿ ಮಳೆ ಮುನ್ಸೂಚನೆ: ಮಲೆನಾಡು, ಕರಾವಳಿ ಜಿಲ್ಲೆಗಳಿಗೆ 'ಯೆಲ್ಲೋ ಅಲರ್ಟ್' ಘೋಷಣೆ

ಇಂದಿನಿಂದ ಮೂರು ದಿನ ಭಾರಿ ಮಳೆ ಮುನ್ಸೂಚನೆ: ಮಲೆನಾಡು, ಕರಾವಳಿ ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಣೆ

ಬೆಂಗಳೂರು: ರಾಜ್ಯದ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಇಂದಿನಿಂದ ಮೂರು ದಿನ ಹೆಚ್ಚಿನ ಮಳೆ ಆಗಲಿದೆ. ಕರಾವಳಿಯಲ್ಲಿ ಸೋಮವಾರದಿಂದ ಮೂರು ದಿನ ವ್ಯಾಪಕ ಮಳೆ ಆಗಲಿದ್ದು, ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 9 ಮತ್ತು 10ರಂದು ಹೆಚ್ಚಿನ ಮಳೆಯಾಗಲಿದೆ. ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಂಭವ ಹಿನ್ನಲೆಯಲ್ಲಿ ಯೆಲ್ಲೋ ಅಲರ್ಟ್ ನೀಡಲಾಗಿದೆ.

ಸೆಪ್ಟೆಂಬರ್ 9, 10ರಂದು ಉತ್ತರ ಒಳನಾಡಿನಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾನುವಾರ ಕಲಬುರಗಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ ಜಿಲ್ಲೆಯ ಹಲವೆಡೆ ಮಳೆಯಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular