ಸೆಪ್ಟೆಂಬರ್ 13ರಂದು ರಾಜ್ಯಾದ್ಯಂತ ತೆರೆ ಮೇಲೆ ಬರಲು ಸಜ್ಜಾಗಿರುವ ‘ಕಾಲಾಪತ್ಥರ್’ ಚಿತ್ರದ ಟ್ರೈಲರ್ ನಿನ್ನೆ ಯೂಟ್ಯೂಬ್ ನಲ್ಲಿ ಬಿಡುಗಡೆಯಾಗಿದ್ದು, ಸಾಕಷ್ಟು ಕುತೂಹಲ ಮೂಡಿಸಿದೆ. ಈ ಟ್ರೈಲರ್ ಎಲ್ಲರ ಗಮನ ಸೆಳೆದಿದ್ದು, ಒಳ್ಳೆಯ ಪ್ರತಿಕ್ರಿಯೆಗಳನ್ನು ಪಡೆದುಕೊಂಡಿದೆ.
ವಿಕ್ಕಿ ವರುಣ್ ನಿರ್ದೇಶಿಸಿ ನಾಯಕನಾಗಿ ಅಭಿನಯಿಸಿರುವ ಈ ಚಿತ್ರದಲ್ಲಿ ಧನ್ಯ ರಾಮ್ ಕುಮಾರ್ ನಾಯಕಿಯಾಗಿ ಕಾಣಿಸಿಕೊಂಡಿದ್ದು, ನಾಗಾಭರಣ, ಅಚ್ಯುತ್ ಕುಮಾರ್ ಸಂಪತ್, ರಾಜೇಶ್ ನಟರಂಗ, ಗಲ್ಲಿ ನಟ, ಬಸು ಹಿರೇಮಠ, ಕಾಂತರಾಜ್ ಕಡ್ಡಿಪುಡಿ ಉಳಿದ ಪಾತ್ರವರ್ಗದಲ್ಲಿದ್ದಾರೆ. ಅನೂಪ್ ಸೀಳಿನ್ ಸಂಗೀತ ಸಂಯೋಜನೆ ನೀಡಿದ್ದು, ಸಂದೀಪ್ ಕುಮಾರ್ ಛಾಯಾಗ್ರಾಹಣ, ದೀಪು ಎಸ್ ಕುಮಾರ್ ಸಂಕಲನ, ಪುಟ್ಟರಾಜು ವೇಷಭೂಷಣ, ಹಾಗೂ ವಿಕ್ರಮ್ ಮೋರ್ ಮತ್ತು ಮಾಸ್ ಮಾದ ಅವರ ಸಾಹಸ ನಿರ್ದೇಶನವಿದೆ. ಭುವನ್ ಮೂವೀಸ್ ಬ್ಯಾನರ್ ನಲ್ಲಿ ಸುರೇಶ್ – ನಾಗರಾಜು ನಿರ್ಮಾಣ ಮಾಡಿದ್ದಾರೆ.