HomeKarnatakaBIG NEWS : ಹಿರಿಯ ಪತ್ರಕರ್ತ 'ವಸಂತ ನಾಡಿಗೇರ' ನಿಧನಕ್ಕೆ 'CM ಸಿದ್ದರಾಮಯ್ಯ' ಸಂತಾಪ

BIG NEWS : ಹಿರಿಯ ಪತ್ರಕರ್ತ ‘ವಸಂತ ನಾಡಿಗೇರ’ ನಿಧನಕ್ಕೆ ‘CM ಸಿದ್ದರಾಮಯ್ಯ’ ಸಂತಾಪ

ಬೆಂಗಳೂರು : ಹಿರಿಯ ಪತ್ರಕರ್ತ ವಸಂತ ನಾಡಿಗೇರ ನಿಧನರಾಗಿದ್ದು, ಸಿಎಂ ಸಿದ್ದರಾಮಯ್ಯ ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ.

ಹಿರಿಯ ಪತ್ರಕರ್ತರಾದ ವಸಂತ ನಾಡಿಗೇರ ಅವರ ನಿಧನವಾರ್ತೆ ನೋವುಂಟುಮಾಡಿದೆ.ವಿಜಯ ಕರ್ನಾಟಕದಲ್ಲಿ ಹಿರಿಯ ಸಹಾಯಕ ಸಂಪಾದಕರಾಗಿ, ಸಂಯುಕ್ತ ಕರ್ನಾಟಕದಲ್ಲಿ ಸಂಪಾದಕರಾಗಿ, ಹೀಗೆ ಹಲವು ದಶಕಗಳಿಂದ ಪತ್ರಿಕಾರಂಗದಲ್ಲಿ ಸೇವೆಸಲ್ಲಿಸುತ್ತಿದ್ದ ವಸಂತ ನಾಡಿಗೇರ ಅವರ ಅಗಲಿಕೆಯಿಂದ ಪತ್ರಿಕಾರಂಗಕ್ಕೆ ಬಹುದೊಡ್ಡ ನಷ್ಟವಾಗಿದೆ. ಮೃತರ ಆತ್ಮಕ್ಕೆ ಶಾಂತಿ ಸಿಗಲೆಂದು ಪ್ರಾರ್ಥಿಸುತ್ತೇನೆ. ಅವರ ದುಃಖತಪ್ತ ಕುಟುಂಬ ವರ್ಗಕ್ಕೆ ನನ್ನ ಸಂತಾಪಗಳು ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular