ಬೆಂಗಳೂರು : ಸ್ಯಾಂಡಲ್ ವುಡ್ ನಲ್ಲಿ ಮತ್ತೆ ‘ಮೀಟೂ’ ವಿಚಾರ ಸದ್ದು ಮಾಡುತ್ತಿದ್ದು, ಈ ಹಿನ್ನೆಲೆ ಸೆ.16 ರಂದು ಫಿಲ್ಮ್ ಚೇಂಬರ್ ನಲ್ಲಿ ಮಹತ್ವದ ಸಭೆ ನಿಗದಿಯಾಗಿದೆ.
ಕನ್ನಡ ಚಿತ್ರರಂಗದಲ್ಲಿ ನಟಿಯರು ಎದುರಿಸುತ್ತಿರುವ ಲೈಂಗಿಕ ದೌರ್ಜನ್ಯ ಪ್ರಕರಣಗಳ ಅಧ್ಯಯನ ನಡೆಸಿ ವರದಿ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಸೆಪ್ಟೆಂಬರ್ 16ರಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ ನಡೆಯಲಿದೆ.
ಸಭೆಯಲ್ಲಿ ನಟ ನಟಿಯರು, ಚಿತ್ರರಂಗದ ಪ್ರಮುಖರು ಭಾಗವಹಿಸಲಿದ್ದಾರೆ. ಚಿತ್ರರಂಗದ ಎಲ್ಲರನ್ನೂ ಒಟ್ಟುಗೂಡಿಸಿ ಸಭೆ ನಡೆಸುವಂತೆ ರಾಜ್ಯ ಮಹಿಳಾ ಆಯೋಗ ವಾಣಿಜ್ಯ ಮಂಡಳಿಗೆ ಸೂಚನೆ ನೀಡಿತ್ತು. ಈ ಹಿನ್ನೆಲೆಯಲ್ಲಿ ವಾಣಿಜ್ಯ ಮಂಡಳಿಯಲ್ಲಿ ಸೆಪ್ಟೆಂಬರ್ 16ರಂದು ಸಭೆ ನಿಗದಿಯಾಗಿದೆ. ಅಲ್ಲದೇ ಸ್ಯಾಂಡಲ್ ವುಡ್ ನಲ್ಲಿ ಹೇಮಾ ಕಮಿಟಿ ಮಾದರಿಯಲ್ಲಿ ಸಮಿತಿ ರಚಿಸುವಂತೆ ಹಲವರು ಆಗ್ರಹಿಸಿದ್ದಾರೆ.
ನಮ್ಮ ಫಿಲ್ಮ್ ಇಂಡಸ್ಟ್ರಿ ಫಾರ್ ರೈಟ್ಸ್ ಅಂಡ್ ಇಕ್ವಾಲಿಟಿ (ಫೈರ್) ಮತ್ತು ಮೀಟೂ ಆಕ್ಟಿವಿಸಂ (2018) ಕನ್ನಡ ಚಲನಚಿತ್ರೋದ್ಯಮವು ಇದಕ್ಕಿಂತ ಭಿನ್ನವಾಗಿಲ್ಲ ಎಂಬುದನ್ನು ತೋರಿಸುತ್ತದೆ.ಕನ್ನಡ ಚಲನಚಿತ್ರ ರಂಗದಲ್ಲಿರೋ ಲೈಂಗಿಕ ದೌರ್ಜನ್ಯವನ್ನು ನಿರ್ಮೂಲನೆ ಮಾಡಲು ಕರ್ನಾಟಕ ಸರ್ಕಾರ ಕ್ರಮ ಕೈಗೊಳ್ಳಲಿ’ ಎಂದು ನಟ ಚೇತನ್ ಅಹಿಂಸಾ ಆಗ್ರಹಿಸಿದ್ದರು.