HomeKarnatakaBIG NEWS: ಸಿಎಂ ಪ್ರತಿಕೃತಿಗೆ ಚಪ್ಪಲಿ ಏಟು ಪ್ರಕರಣ: ಶಾಸಕ ಯಶ್ ಪಾಲ್ ಸುವರ್ಣ ಸೇರಿ...

BIG NEWS: ಸಿಎಂ ಪ್ರತಿಕೃತಿಗೆ ಚಪ್ಪಲಿ ಏಟು ಪ್ರಕರಣ: ಶಾಸಕ ಯಶ್ ಪಾಲ್ ಸುವರ್ಣ ಸೇರಿ 11 ಜನರ ವಿರುದ್ಧ ಕೇಸ್ ದಾಖಲು

ಉಡುಪಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರ‍ಿತಿಗೆ ಚಪ್ಪಲಿಯಿಂದ ಹೊಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಯಶ್ ಪಾಲ್ ಸುವರ್ಣ ಸೇರಿದಂತೆ ಬಿಜೆಪಿ 11 ಕಾರ್ಯಕರ್ತರ ವಿರುದ್ಧ ಕೇಸ್ ದಾಖಲಾಗಿದೆ.

ಕಾಂಗ್ರೆಸ್ ಮುಖಂಡ ಸೌರಭ್ ನೀಡಿದ ದೂರಿನ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ಮಣಿಪಾಲ್ ಪೊಲೀಸ್ ಠಾಣೆಯಲ್ಲಿ ಯಶ್ ಪಾಲ್ ಸುವರ್ಣ ಸೇರಿದಂತೆ 11 ಜನರ ವಿರುದ್ಧ ಪ್ರಕರಣ ದಾಖಲಾಗಿದೆ.

ಕುಂದಾಪುರ ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ರಾಮಕೃಷ್ಣ ಬಿ.ಜಿ ಅವರಿಗೆ ರಾಜ್ಯಮಟ್ಟದ ಉತ್ತಮ ಪ್ರಾಂಶುಪಾಲ ಪ್ರಶಸ್ತಿ ಘೋಷಿಸಲಾಗಿತ್ತು. ಈ ಪ್ರಶಸ್ತಿಗೆ ರಾಮಕೃಷ್ಣ ಅವರನ್ನು ಆಯ್ಕೆ ಮಾಡಿದ್ದಕ್ಕೆ ಹಿಜಾಬ್ ಪರ ಹೋರಾಟಗಾರರು ಆಕ್ಷೇಪ ವ್ಯಕ್ತಪಡಿಸಿದ್ದರು. ಹಿಜಾಬ್ ಧರಿಸಿ ಬಂದಿದ್ದ ಮುಸ್ಲಿಂ ವಿದ್ಯಾರ್ಥಿನಿಯನ್ನು ಕಾಲೇಜು ಗೇಟ್ ಒಳಗೆ ಬಿಡದೇ ಪ್ರಾಂಶುಪಾಲರು ತಡೆದಿದ್ದರು. ವಿದ್ಯಾರ್ಥಿನಿ ಗೇಟ್ ಬಳಿ ನಿಂತಿರುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿಯೂ ವೈರಲ್ ಆಗಿತ್ತು. ಹೀಗಾಗಿ ಪ್ರಾಂಶುಪಾಲರಿಗೆ ಉತ್ತಮ ಪ್ರಾಂಶುಪಾಲ ಪ್ರಶಸ್ತಿ ಘೋಷಣೆ ಸರಿಯಲ್ಲ ಎಂದು ತೀವ್ರ ಆಕ್ಷೇಪ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಪ್ರಶಸ್ತಿಗೆ ತಡೆ ನೀಡಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸರ್ಕಾರದ ಕ್ರಮ ಖಂಡಿಸಿ ಶಾಸಕ ಯಶ್ ಪಾಲ್ ಸುವರ್ಣ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಮಣಿಪಾಲದ ಸಿಂಡಿಕೇಟ್ ಸರ್ಕಲ್ ನಲ್ಲಿ ಪ್ರತಿಭಟನೆ ನಡೆಸಿದ್ದರು. ಈ ವೇಳೆ ಸಿಎಂ ಸಿದ್ದರಾಮಯ್ಯ ಪ್ರತಿಕೃತಿಗೆ ಚಪ್ಪಲಿ ಏಟು ಹೊಡೆದು, ದಹಿಸಿದ್ದರು. ಈ ಹಿನ್ನೆಲೆಯಲ್ಲಿ ಶಾಂತಿಭಂಗ ತರುವ ಯತ್ನ ಆರೋಪದಡಿ ಶಾಸಕರು ಹಾಗೂ ಬಿಜೆಪಿ ಕಾರ್ಯಕರ್ತರ ವಿರುದ್ಧ ದೂರು ದಾಖಲಾಗಿತ್ತು.

ಇದೀಗ ಶಾಸಕ ಯಶ್ ಪಾಲ್ ಸುವರ್ಣ, ನಗರಸಭ ಅಧ್ಯಕ್ಷ ಪ್ರಭಾಕರ ಪೂಜಾರಿ, ಗಿರೀಶ್ ಅಂಚನ್, ವಿಜಯ್ ಕೊಡವೂರು, ಬಾಲಕೃಷ್ಣ ಶೆಟ್ಟಿ ಸೇರಿದಂತೆ 11 ಜನರ ವಿರುದ್ಧ ಪ್ರಕರಣ ದಾಖಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular