HomeKarnatakaಕಲಾವಿದೆಯರ ಮೇಲೆ ದೌರ್ಜನ್ಯ: ಸೆ. 16 ಫಿಲ್ಮ್ ಚೇಂಬರ್ ನಲ್ಲಿ ಮಹಿಳಾ ಆಯೋಗದ ಸಭೆ

ಕಲಾವಿದೆಯರ ಮೇಲೆ ದೌರ್ಜನ್ಯ: ಸೆ. 16 ಫಿಲ್ಮ್ ಚೇಂಬರ್ ನಲ್ಲಿ ಮಹಿಳಾ ಆಯೋಗದ ಸಭೆ

ಬೆಂಗಳೂರು: ಸ್ಯಾಂಡಲ್ ವುಡ್ ನಲ್ಲಿ ಕಲಾವಿದೆಯರು ಎದುರಿಸುತ್ತಿರುವ ಸಮಸ್ಯೆ ಬಗೆಹರಿಸುವುದು, ಸೌಲಭ್ಯ. ಭದ್ರತೆ ಕಲ್ಪಿಸುವ ಕುರಿತಾಗಿ ಸೆ. 16 ರಂದು ಮಹತ್ವದ ಸಭೆ ನಡೆಯಲಿದೆ.

ಕೇರಳದಲ್ಲಿ ಹೇಮಾ ಸಮಿತಿ ರಚನೆ ಮಾದರಿಯಲ್ಲಿ ರಾಜ್ಯದಲ್ಲಿಯೂ ಸಮಿತಿ ರಚನೆ ಕುರಿತಾಗಿ FIRE ಸಂಘಟನೆ ಮನವಿ ಮಾಡಿದ್ದ ಹಿನ್ನಲೆಯಲ್ಲಿ ಸಭೆ ಕರೆಯಲಾಗಿದೆ. ಸೆ. 16 ರಂದು ಬೆಳಗ್ಗೆ 11.30ಕ್ಕೆ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌದರಿ ಅಧ್ಯಕ್ಷತೆಯಲ್ಲಿ ಫಿಲ್ಮ್ ಚೇಂಬರ್ ನಲ್ಲಿ ಸಭೆ ನಡೆಯಲಿದೆ

ಸಭೆಯಲ್ಲಿ ಕಲಾವಿದೆಯರು ಎದುರಿಸುತ್ತಿರುವ ಸಮಸ್ಯೆ, ಭದ್ರತೆ, ಸೌಲಭ್ಯಗಳ ಬಗ್ಗೆ ಸಮಾಲೋಚನೆ ನಡೆಸಲಾಗುವುದು. ಸಭೆಯ ವರದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಸಲಾಗುವುದು. ಬಳಿಕ ರಾಜ್ಯದಲ್ಲಿ ಸಮಿತಿ ರಚನೆ ಬಗ್ಗೆ ತೀರ್ಮಾನ ಕೈಗೊಳ್ಳಲಾಗುತ್ತದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular