alex Certify JOB ALERT : ಉದ್ಯೋಗಾಂಕ್ಷಿಗಳ ಗಮನಕ್ಕೆ : ನಾಳೆ ಈ ಹುದ್ದೆಗಳಿಗೆ ಮಡಿಕೇರಿಯಲ್ಲಿ ನೇರ ಸಂದರ್ಶನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

JOB ALERT : ಉದ್ಯೋಗಾಂಕ್ಷಿಗಳ ಗಮನಕ್ಕೆ : ನಾಳೆ ಈ ಹುದ್ದೆಗಳಿಗೆ ಮಡಿಕೇರಿಯಲ್ಲಿ ನೇರ ಸಂದರ್ಶನ

ಕೇಂದ್ರ ಸರ್ಕಾರದ ಮಿಷನ್ ಶಕ್ತಿ ಯೋಜನೆಯಡಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಅನುಷ್ಠಾನಗೊಳಿಸಲಾಗುತ್ತಿರುವ ‘ಜಿಲ್ಲಾ ಮಹಿಳಾ ಸಬಲೀಕರಣ ಘಟಕ’ಕ್ಕೆ ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ, ಜಿಲ್ಲಾಧಿಕಾರಿರವರ ಅನುಮೋದನೆಯಂತೆ ಸೆಪ್ಟೆಂಬರ್, 11 ರಂದು ಬೆಳಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಿಷನ್ ಸಂಯೋಜಕರ, ಪ್ರಧಾನ ಮಂತ್ರಿ ಮಾತೃವಂದನಾ ಜಿಲ್ಲಾ ಸಂಯೋಜಕರು ಹಾಗೂ ಹಣಕಾಸು ಸಾಕ್ಷರತೆ ಮತ್ತು ಲೆಕ್ಕ ಪರಿಶೋಧಕರ ಹುದ್ದೆಗೆ ಜಿಲ್ಲಾಧಿಕಾರಿಗಳ ಕಚೇರಿ, ಜಿಲ್ಲಾಡಳಿತ ಭವನ, ಮಡಿಕೇರಿ ಇಲ್ಲಿ ಸಂದರ್ಶನ ನಡೆಯಲಿದೆ.

ಆದ್ದರಿಂದ ಸಂದರ್ಶನಕ್ಕೆ ಹಾಜರಾಗುವ ಅಭ್ಯರ್ಥಿಗಳು ತಮ್ಮ ಎಲ್ಲಾ ಮೂಲ ದಾಖಲಾತಿಗಳೊಂದಿಗೆ ಸೆಪ್ಟೆಂಬರ್, 11 ರಂದು ಸಂದರ್ಶನಕ್ಕೆ 30 ನಿಮಿಷ ಮುಂಚೆ ಹಾಜರಾಗುವುದು. ಹೆಚ್ಚಿನ ಮಾಹಿತಿಗೆ ದೂ.ಸಂ. 08272-224451 ಅನ್ನು ಸಂಪರ್ಕಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...