alex Certify BIG NEWS : ‘PSI’ ಪರೀಕ್ಷೆ ಮುಂದೂಡುವಂತೆ ಗೃಹ ಸಚಿವ ಜಿ. ಪರಮೇಶ್ವರ್’ಗೆ ಬಿಜೆಪಿ ಮನವಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ‘PSI’ ಪರೀಕ್ಷೆ ಮುಂದೂಡುವಂತೆ ಗೃಹ ಸಚಿವ ಜಿ. ಪರಮೇಶ್ವರ್’ಗೆ ಬಿಜೆಪಿ ಮನವಿ

ಬೆಂಗಳೂರು : (ಪಿಎಸ್ ಐ) ಪರೀಕ್ಷೆ ಮುಂದೂಡುವಂತೆ ಗೃಹ ಸಚಿವ ಜಿ. ಪರಮೇಶ್ವರ್ ಅವರಿಗೆ ಬಿಜೆಪಿ ಮನವಿ ಮಾಡಿದೆ.

ಮಾಜಿ ಸಚಿವ ಅಶ್ವತ್ ನಾರಾಯಣ್ ಸೇರಿದಂತೆ ಮತ್ತಿತರರು ಇಂದು ಗೃಹ ಸಚಿವ ಪರಮೇಶ್ವರ್ ಅವರನ್ನು ಭೇಟಿ ಮಾಡಿದರು. ಭೇಟಿ ಮಾಡಿ ಪಿಎಸ್ ಐ ಪರೀಕ್ಷೆ ಮುಂದೂಡುವಂತೆ ಗೃಹ ಸಚಿವರಿಗೆ ಮನವಿ ಮಾಡಿದರು. ಒಂದೇ ದಿನ ಪಿಎಸ್ ಐ ಹಾಗೂ UPSC ಪರೀಕ್ಷೆ ಬೇಡ, ಪರೀಕ್ಷೆ ಮುಂದೂಡುವಂತೆ ಮನವಿ ಮಾಡಿದ್ದಾರೆ.

ಜೂನ್ 16ರಂದು ಯುಪಿಎಸ್ಸಿ ಪ್ರಿಲಿಮ್ಸ್ ಪರೀಕ್ಷೆ ನಡೆದಿದ್ದು, ಸೆಪ್ಟೆಂಬರ್ 22ಕ್ಕೆ ಮುಖ್ಯ ಪರೀಕ್ಷೆ ನಡೆಯಲಿದೆ. ಪಿಎಸ್ಐ ಪರೀಕ್ಷೆ ಸೆ.22ರಂದು ನಡೆಯಲಿದೆ.

ಟ್ವೀಟ್ ನಲ್ಲಿ ಕಿಡಿಕಾರಿದ್ದ ಬಿಜೆಪಿ

ಯುವಕರ ಭವಿಷ್ಯದ ಕುರಿತು ಎಳ್ಳಷ್ಟು ಕಾಳಜಿಯಿಲ್ಲದ ಭ್ರಷ್ಟ ಸರ್ಕಾರ, ಯುಪಿಎಸ್ಸಿ ಪರೀಕ್ಷೆ ನಡೆಯುವ ದಿನಾಂಕದಂದೇ ಪಿಎಸ್ಐ ಪರೀಕ್ಷೆ ದಿನಾಂಕ ನಿಗದಿ ಮಾಡುವ ಮೂಲಕ ಯುವಕರ ಭವಿಷ್ಯಕ್ಕೆ ಕಲ್ಲು ಹಾಕಲು ಹೊರಟಿದೆ. ಯುಪಿಎಸ್ಸಿ ಹಲವು ತಿಂಗಳುಗಳ ಮೊದಲೇ ಪರೀಕ್ಷೆ ದಿನಾಂಕ ಪ್ರಕಟಿಸುತ್ತಿದೆ. ಅದರಂತೆ, ಜೂನ್ 16ರಂದು ಯುಪಿಎಸ್ಸಿ ಪ್ರಿಲಿಮ್ಸ್ ಪರೀಕ್ಷೆ ನಡೆದಿದ್ದು, ಸೆಪ್ಟೆಂಬರ್ 22ಕ್ಕೆ ಮುಖ್ಯ ಪರೀಕ್ಷೆ ನಡೆಯಲಿದೆ. ವಿವೇಚನೆ, ಸಂವೇದನೆ ಇಲ್ಲದ ಸಿಎಂ ಸಿದ್ದರಾಮಯ್ಯನವರ ಸರ್ಕಾರ ಪಿಎಸ್ಐ ಪರೀಕ್ಷೆಯನ್ನು ಸೆ.22ರಂದೇ ನಡೆಸುವುದಾಗಿ ಜುಲೈ 31ರಂದು ಪ್ರಕಟಿಸಿದೆ. ಈ ಮೂಲಕ ಯುವಕರ ಉದ್ಯೋಗದ ಕನಸಿಗೆ ಕೊಳ್ಳಿಯಿಡುವ ಕೆಲಸ ಮಾಡಿದೆ. ಸೆ.22ರಂದು ನಿಗದಿಯಾಗಿರುವ ಯುಪಿಎಸ್ಸಿ ಮುಖ್ಯ ಪರೀಕ್ಷೆ, ಎಸ್ಎಸ್ಸಿ ಪರೀಕ್ಷೆ ಜೊತೆಗೆ ಪಿಎಸ್ಐ ಪರೀಕ್ಷೆಯೂ ನಡೆದರೆ ಮೂರೂ ಪರೀಕ್ಷಾರ್ಥಿಗಳಿಗೆ ತೊಂದರೆಯಾಗಲಿದೆ. ಸ್ಪರ್ಧಾತ್ಮಕ ಪರೀಕ್ಷೆ ದಿನಾಂಕ ನಿಗದಿ ಗೊಂದಲದ ಕುರಿತು ವಿಧಾನ ಪರಿಷತ್ ಸದಸ್ಯರಾದ ಶ್ರೀ ಶಶಿಲ್ ನಮೋಶಿ ಅವರು ಈ ಹಿಂದೆ ಮೇಲ್ಮನೆಯಲ್ಲಿ ಕೇಳಿದ್ದ ಪ್ರಶ್ನೆಗೆ, ಯುಪಿಎಸ್ಸಿ, ಎಸ್ಎಸ್ಸಿ ಹಾಗೂ ಎನ್ಟಿಎ ಮತ್ತು ಇತರ ನೇಮಕಾತಿ ಪ್ರಾಧಿಕಾರಗಳಿಂದ ಪ್ರಕಟಿತವಾಗುವ ವೇಳಾಪಟ್ಟಿ ಗಮನದಲ್ಲಿಟ್ಟುಕೊಂಡು ತಾತ್ಕಾಲಿಕ ಪರೀಕ್ಷಾ ದಿನಾಂಕ ನಿಗದಿಪಡಿಸಲಾಗುತ್ತಯೇ? ಎಂಬ ಪ್ರಶ್ನೆಗೆ ಇಲ್ಲ ಒಂದು ವೇಳೆ ಪರೀಕ್ಷೆಗೆ ತೊಂದರೆಯಾದರೇ ಪರೀಕ್ಷೆ ದಿನಾಂಕ ಮರು ನಿಗದಿಪಡಿಸಲಾಗುವುದು ಎಂಬುದಾಗಿ ಸ್ವತಃ ಮುಖ್ಯಮಂತ್ರಿಗಳೇ ವಿಧಾನ ಪರಿಷತ್ತಿನಲ್ಲಿ ಉತ್ತರಿಸಿದ್ದಾರೆ. ಸದ್ಯ ಉಲ್ಟಾ ಹೊಡೆದಿರುವ ಕಾಂಗ್ರೆಸ್ ಸರ್ಕಾರ ಸೆ.22ರಂದು ಪಿಎಸ್ಐ ಪರೀಕ್ಷೆ ನಡೆಸಲು ಹೊರಟಿರುವುದು ಖಂಡನೀಯ, ಕೂಡಲೇ, ವಿದ್ಯಾರ್ಥಿ ವಿರೋಧಿ ನೀತಿ ಕೈಬಿಟ್ಟು, ಸಾವಿರಾರು ಉದ್ಯೋಗಾಕಾಂಕ್ಷಿ ಪರೀಕ್ಷಾರ್ಥಿಗಳ ಭವಿಷ್ಯವನ್ನು ಗಮನದಲ್ಲಿ ಇಟ್ಟುಕೊಂಡು ಪಿಎಸ್ಐ ಪರೀಕ್ಷೆಯ ದಿನಾಂಕವನ್ನು ಮರು ನಿಗದಿ ಮಾಡಲಿ ಎಂದು ಬಿಜೆಪಿ ಟ್ವೀಟ್ ಮಾಡಿತ್ತು.

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...