alex Certify ರಾಜ್ಯ ಸರ್ಕಾರದಿಂದ ‘ಮಹಾತ್ಮಗಾಂಧೀ ಸೇವಾ ಪ್ರಶಸ್ತಿ’ಗೆ ನಾಮನಿರ್ದೇಶನ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯ ಸರ್ಕಾರದಿಂದ ‘ಮಹಾತ್ಮಗಾಂಧೀ ಸೇವಾ ಪ್ರಶಸ್ತಿ’ಗೆ ನಾಮನಿರ್ದೇಶನ ಆಹ್ವಾನ

ಬೆಂಗಳೂರು : ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ ʼಮಹಾತ್ಮಗಾಂಧೀ ಸೇವಾ ಪ್ರಶಸ್ತಿ-ಕರ್ನಾಟಕʼಗೆ 2024 ನೇ ಸಾಲಿಗೆ ಅರ್ಹ ಸಾಧಕರನ್ನು ಅಥವಾ ಸಂಘ ಸಂಸ್ಥೆಗಳನ್ನು ಆಯ್ಕೆ ಮಾಡಲು ನಾಮನಿರ್ದೇಶನಗಳನ್ನು ಆಹ್ವಾನಿಸಲಾಗಿದೆ.

ಸಾರ್ವಜನಿಕ ಜೀವನದಲ್ಲಿ ಮಹಾತ್ಮ ಗಾಂಧೀಜಿಯವರ ಆದರ್ಶಗಳನ್ನು ಅಳವಡಿಸಿಕೊಂಡು ಜೀವನ ನಡೆಸುತ್ತಿರುವ ಕನಿಷ್ಠ 60 ವರ್ಷಗಳಾಗಿರುವ ವ್ಯಕ್ತಿಗಳು ಅಥವಾ 25 ವರ್ಷಗಳು ತುಂಬಿರುವ ಸೇವಾ ಸಂಸ್ಥೆಗಳನ್ನು ಈ ಪ್ರಶಸ್ತಿಗೆ ಪರಿಗಣಿಸಲಾಗುವುದು. ಪ್ರಶಸ್ತಿಯನ್ನು ಆಯ್ಕೆ ಮಾಡಲು ಆಯ್ಕೆ ಸಮಿತಿಯನ್ನು ರಚಿಸಲಾಗುವುದು. 2024ರ ಅಕ್ಟೋಬರ್ 02 ರಂದು ಪ್ರಶಸ್ತಿ ಪ್ರದಾನ ಮಾಡಲಾಗುವುದು.

ಮಹಾತ್ಮ ಗಾಂಧೀಜಿಯವರು ಪ್ರಚುರಪಡಿಸಿದ ಜನಪರ ಕಾರ್ಯಕ್ರಮಗಳಾದ ಅಸ್ಪೃಶ್ಯತೆ ನಿವಾರಣೆ, ಅಹಿಂಸೆ, ಮಹಿಳಾ ಸಬಲೀಕರಣ, ಗ್ರಾಮೀಣ ನೈರ್ಮಲ್ಯ, ಮದ್ಯಪಾನ ವಿರೋಧಿ ನೀತಿ, ಖಾದಿ ಮತ್ತು ಸ್ವದೇಶಿ ವಸ್ತು ಬಳಕೆ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಉದ್ದಾರ, ಈ ಕ್ಷೇತ್ರಗಳಲ್ಲಿ ಸ್ವಯಂ ಪ್ರೇರಣೆಯಿಂದ ತೊಡಗಿರುವ ವ್ಯಕ್ತಿಗಳು ಅಥವಾ ಸಂಸ್ಥೆಗಳು ಈ ಪ್ರಶಸ್ತಿಗೆ ಅರ್ಜಿ ಸಲ್ಲಿಸಬಹುದು ಅಥವಾ ಸಂಘ ಸಂಸ್ಥೆಗಳು ಅಥವಾ ವ್ಯಕ್ತಿಗಳು ನಾಮನಿರ್ದೇಶನ ಕೂಡ ಮಾಡಬಹುದಾಗಿದೆ.

ಸೆಪ್ಟೆಂಬರ್ 19 ರ ಸಂಜೆ 5.30 ರೊಳಗಾಗಿ ಅರ್ಜಿಗಳನ್ನು ಆಯುಕ್ತರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ವಾರ್ತಾ ಸೌಧ, ನಂ. 17, ಭಗವಾನ್ ಮಹಾವೀರ ರಸ್ತೆ (ಇನ್ಫೆಂಟ್ರಿ ರಸ್ತೆ), ಬೆಂಗಳೂರು-560 001 ಅಥವಾ ಇ-ಮೇಲ್ : informationdiprawards@gmail.com ವಿಳಾಸಕ್ಕೆ ಕಳುಹಿಸಬಹುದಾಗಿದೆ.

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...