ಬೆಂಗಳೂರು : ಮದ್ಯ ಪ್ರಿಯರಿಗೆ ಬಿಗ್ ಶಾಕ್ ಎದುರಾಗಿದ್ದು, ಬಿಯರ್ ದರ ಹೆಚ್ಚಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಹೌದು. ಕರ್ನಾಟಕದಲ್ಲಿ ಬಿಯರ್ ಬೆಲೆ ಶೀಘ್ರದಲ್ಲೇ ಪ್ರತಿ ಬಾಟಲಿಗೆ ಸುಮಾರು 10-20 ಹೆಚ್ಚಳವಾಗುವ ಸಾಧ್ಯತೆಯಿದೆ.. ರಾಜ್ಯ ಸರ್ಕಾರದಿಂದ ಬಿಯರ್ ದರ ಏರಿಕೆ ಮಾಡಲು ಸರ್ಕಾರ ತಯಾರಿ ಮಾಡಿಕೊಂಡಿದೆ.
ಬಿಯರ್ ದರ ಹೆಚ್ಚಳಕ್ಕೆ ಸರ್ಕಾರದಿಂದ ಕರಡು ಹೊರಡಿಸಲಾಗಿದೆ.. ಪ್ರತಿ ಬಾಟಲ್ ಬಿಯರ್ ಮೇಲೆ ಬರೋಬ್ಬರಿ 10 ರೂ.ಗಳಿಂದ 12 ರೂ.ಗಳವರೆಗೆ ದರ ಹೆಚ್ಚಳ ಮಾಡಲು ತೀರ್ಮನಿಸಲಾಗಿದೆ. ಪ್ರತಿ ಬಿಯರ್ ಸ್ಲ್ಯಾಬ್ ಗಳ ಮೇಲೆ ದರ ಏರಿಕೆ ಮಾಡಲು ಸಿದ್ದತೆ ನಡೆಸಿದೆ ಎನ್ನಲಾಗಿದೆ.
ದರ ಹೆಚ್ಚಳ ಮಾಡಿದ ನಂತರ ಎಲ್ಲ ಬಿಯರ್‌ಗಳನ್ನು ಮೂರು ಸ್ಲ್ಯಾಬ್‌ಗಳನ್ನಾಗಿ ಮಾಡಿ ಮಾರಾಟ ಮಾಡಲು ತೀರ್ಮಾನಿಸಲಾಗಿದೆ ಎಂದು ತಿಳಿದುಬಂದಿದೆ.ಕರ್ನಾಟಕದಲ್ಲಿ ಉದ್ದೇಶಿತ ಮದ್ಯದ ಬೆಲೆ ಪರಿಷ್ಕರಣೆಯು ಭಾರತೀಯ ನಿರ್ಮಿತ ಮದ್ಯ ಮಾರಾಟ ಮತ್ತು ಅಬಕಾರಿ ಆದಾಯವನ್ನು ಹೆಚ್ಚಿಸುವ ಗುರಿಯನ್ನು ಹೊಂದಿದೆ. ಸಿದ್ದರಾಮಯ್ಯ ಸರ್ಕಾರವು ಬಿಯರ್ ಬೆಲೆಯನ್ನು ಹೆಚ್ಚಿಸಲು ಮತ್ತು ಪ್ರೀಮಿಯಂ ಮದ್ಯದ ಬೆಲೆಯನ್ನು ಕಡಿಮೆ ಮಾಡಲು ಸಜ್ಜಾಗಿದೆ.