ಬೆಂಗಳೂರು: ರಾಜ್ಯದಲ್ಲಿ ಸೆ.16ರಿಂದ HSRP ನಂಬರ್ ಪ್ಲೇಟ್ ಕಡ್ಡಾಯವಾಗಿದ್ದು, ಇಲ್ಲದಿದ್ರೆ 500 ರೂ. ದಂಡ ವಿಧಿಸಲಾಗುತ್ತದೆ.
ಹೌದು. ವಾಹನಗಳಿಗೆ ಹೈ ಸೆಕ್ಯೂರಿಟಿ ನೋಂದಣಿ ಫಲಕ(HSRP) ಅಳವಡಿಕೆಗೆ ರಾಜ್ಯ ಸರ್ಕಾರದ ವತಿಯಿಂದ ನೀಡಲಾದ ಗಡುವು ಸೆ. 15ಕ್ಕೆ ಮುಕ್ತಾಯವಾಗಲಿದೆ. ಸೆ. 16 ರಿಂದಲೇ HSRP ಅಳವಡಿಸದ ವಾಹನಗಳಿಗೆ ದಂಡ ವಿಧಿಸಲು ಸಾರಿಗೆ ಇಲಾಖೆ ನಿರ್ಧರಿಸಿದೆ.
ಸೆ.16ರಿಂದ ಎಲ್ಲಾ ಜಿಲ್ಲೆಗಳಲ್ಲೂ 500 ರೂ. ದಂಡ ಹಾಕುತ್ತೇವೆ. ಮೊದಲ ಸಲ 500 ರೂ. ದಂಡ ವಿಧಿಸಿದರೇ ಎರಡನೇ ಸಲಕ್ಕೆ 1,000 ರೂ. ದಂಡ ವಿಧಿಸಲಾಗುತ್ತದೆ ಎಂದು ಸಾರಿಗೆ ಇಲಾಖೆ ಎಚ್ಚರಿಕೆ ನೀಡಿದೆ. 1.49 ಕೋಟಿ ವಾಹನಗಳು ಇನ್ನೂ ಹೆಚ್ಎಸ್ಆರ್ಪಿ ಹಾಕಿಸಿಲ್ಲ ಎಂದು ತಿಳಿದು ಬಂದಿದೆ.
2019ರ ಏಪ್ರಿಲ್ 1ಕ್ಕಿಂತ ಹಿಂದಿನ ವಾಹನಗಳು ಎಚ್ಎಸ್ಆರ್ಪಿ ಅಳವಡಿಸಿಕೊಳ್ಳಬೇಕು, ನೀವು HSRP ನಂಬರ್ ಪ್ಲೇಟ್ ಗೆ ರಿಜಿಸ್ಟ್ರೇಷನ್ ಮಾಡಿಸಿಕೊಳ್ಳುವುದು ಕಡ್ಡಾಯವಾಗಿದೆ.ಹೈ ಸೆಕ್ಯೂರಿಟಿ ರಿಜಿಸ್ಟ್ರೇಷನ್ ಪ್ಲೇಟ್ ವಾಹನಗಳ ಸುರಕ್ಷತೆಗಾಗಿ ಈ ಪ್ಲೇಟ್ ಅಳವಡಿಕೆಯನ್ನ ಕಡ್ಡಾಯ ಮಾಡಲಾಗಿದೆ. ಕರ್ನಾಟಕ ರಾಜ್ಯದಲ್ಲಿ 1ನೇ ಏಪ್ರಿಲ್ 2019ಕ್ಕಿಂತ ಮೊದಲು ನೋಂದಾಯಿಸಲ್ಪಟ್ಟ ಹಳೆಯ ಎಲ್ಲಾ (ಹಳೆಯ / ಅಸ್ತಿತ್ವದಲ್ಲಿರುವ ವಾಹನಗಳು) (ದ್ವಿಚಕ್ರ ಮತ್ತು ತ್ರಿಚಕ್ರ ವಾಹನಗಳು, ಲಘು ಮೋಟಾರು ವಾಹನಗಳು, ಪ್ರಯಾಣಿಕ ಕಾರುಗಳು, ಮಧ್ಯಮ ಮತ್ತು ಭಾರಿ ವಾಣಿಜ್ಯ ವಾಹನಗಳು, ಟ್ರೈಲರ್, ಟ್ರ್ಯಾಕ್ಟರ್ ಇತ್ಯಾದಿ) ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕಗಳನ್ನು (ಹೆಚ್ಎಸ್ಆರ್ಪಿ) ಅಳವಡಿಸುವುದು ಕಡ್ಡಾಯವಾಗಿದೆ.
ಆನ್ಲೈನ್ ಮೂಲಕ ಅಳವಡಿಕೆ ಹೇಗೆ?
ಸ್ಕ್ಯಾನ್ ಮಾಡಿ
. ಎಚ್ಎಸ್ಆರ್ಪಿ ಮೇಲೆ ಕ್ಲಿಕ್ ಮಾಡಿ
• ವಾಹನದ ಮೂಲ ವಿವರಗಳನ್ನು ಭರ್ತಿ ಮಾಡಿ
• ನಂಬರ್ ಪ್ಲೇಟ್ ಅಳವಡಿಕೆಗೆ ಸ್ಥಳ ಆಯ್ದುಕೊಂಡರೆ ಅವರೇ ಬ೦ದು ಫಿಟ್ ಮಾಡಿಕೊಡುತ್ತಾರೆ
2019ರ ಏಪ್ರಿಲ್ 1ಕ್ಕಿಂತ ಹಿಂದಿನ ವಾಹನಗಳು ಎಚ್ಎಸ್ಆರ್ಪಿ ಅಳವಡಿಸಿಕೊಳ್ಳಬೇಕು
ಆದರೆ, ವಾಹನ ಮಾಲೀಕರು ಆಸಕ್ತಿ ತೋರಿಸದ ಕಾರಣ 2024ರ ಫೆಬ್ರವರಿವರೆಗೆ ಗಡುವು ವಿಸ್ತರಿಸಲಾಗಿತ್ತು..ಹೆಚ್ಚಿನ ವಾಹನಗಳ ಮಾಲೀಕರು HSRP ಅಳವಡಿಸಿಕೊಳ್ಳದ ಹಿನ್ನೆಲೆಯಲ್ಲಿ ಜುಲೈ ಮತ್ತು ಸೆಪ್ಟಂಬರ್ 15ಕ್ಕೆ ಎರಡು ಬಾರಿ ಗಡುವು ವಿಸ್ತರಿಸಿ ಸಾರಿಗೆ ಇಲಾಖೆ ಆದೇಶಿಸಿತ್ತು.ಇದೇ ಸೆಪ್ಟೆಂಬರ್ 15ಕ್ಕೆ ರಾಜ್ಯ ಸರ್ಕಾರ ನೀಡಿದ್ದ ಗಡುವು ಮುಕ್ತಾಯವಾಗಲಿದೆ. ಹೀಗಾಗಿ ಸೆ. 16ರಿಂದ HSRP ಅಳವಡಿಸದ ವಾಹನಗಳಿಗೆ ದಂಡ ವಿಧಿಸಲು ಸಾರಿಗೆ ಇಲಾಖೆ ನಿರ್ಧರಿಸಿದೆ ಎಂದು ಹೇಳಲಾಗಿದೆ.