ನವದೆಹಲಿ: ಪ್ಯಾರಿಸ್ ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಪದಕ ವಿಜೇತರಿಗೆ ಕೇಂದ್ರ ಕ್ರೀಡಾ ಸಚಿವಾಲಯದಿಂದ ಭರ್ಜರಿ ನಗದು ಬಹುಮಾನ ಘೋಷಿಸಲಾಗಿದೆ.
ಚಿನ್ನದ ಪದಕ ಗೆದ್ದ ಭಾರತದ ಕ್ರೀಡಾಪಟುಗಳಿಗೆ 75 ಲಕ್ಷ ರೂ. ಬೆಳ್ಳಿ ಪದಕ ಗೆದ್ದವರಿಗೆ 50 ಲಕ್ಷ ರೂ., ಕಂಚಿನ ಪದಕ ಗೆದ್ದವರಿಗೆ 30 ಲಕ್ಷ ರೂಪಾಯಿ ನಗದು ಬಹುಮಾನ ನೀಡಲಾಗುವುದು ಎಂದು ಕ್ರೀಡಾ ಸಚಿವ ಮನ್ ಸುಖ್ ಮಾಂಡವಿಯಾ ತಿಳಿಸಿದ್ದಾರೆ.
ಪ್ಯಾರಾಲಿಂಪಿಕ್ಸ್ ನಲ್ಲಿ ಪದಕ ವಿಜೇತರಿಗೆ ಏರ್ಪಡಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಸಚಿವರು ಈ ಘೋಷಣೆ ಮಾಡಿದ್ದಾರೆ. ಪ್ಯಾರಿಸ್ ಪ್ಯಾರಾಲಿಂಪಿಕ್ಸ್ ನಲ್ಲಿ ಭಾರತ 7 ಚಿನ್ನ, 9 ಬೆಳ್ಳಿ, 13 ಕಂಚಿನ ಪದಕಗಳನ್ನು ಗೆಲ್ಲುವ ಮೂಲಕ ಸಾರ್ವಕಾಲಿಕ ದಾಖಲೆ ಬರೆದಿದ್ದು, ಚಿನ್ನ, ಬೆಳ್ಳಿ, ಕಂಚಿನ ಪದಕ ವಿಜೇತ ಕ್ರೀಡಾಪಟುಗಳಿಗೆ ಕ್ರಮವಾಗಿ 75 ಲಕ್ಷ ರೂ., 50 ಲಕ್ಷ ರೂ. ಹಾಗೂ 30 ಲಕ್ಷ ರೂ. ನಗದು ಬಹುಮಾನ ನೀಡಲಾಗುವುದು.