HomeEntertainmentBIG NEWS: 'ಕನ್ನಡತಿ' ಖ್ಯಾತಿಯ ನಟ ಕಿರಣ್ ರಾಜ್ ಕಾರು ಅಪಘಾತ; ಗಂಭೀರ ಗಾಯ

BIG NEWS: ‘ಕನ್ನಡತಿ’ ಖ್ಯಾತಿಯ ನಟ ಕಿರಣ್ ರಾಜ್ ಕಾರು ಅಪಘಾತ; ಗಂಭೀರ ಗಾಯ

ಬೆಂಗಳೂರು: ‘ಕನ್ನಡತಿ’ ಸೀರಿಯಲ್ ಖ್ಯಾತಿಯ ನಟ ಕಿರಣ್ ರಾಜ್ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ನಟ ಗಂಭೀರವಾಗಿ ಗಾಯಗೊಂಡಿದ್ದಾರೆ.

ಸಿದ್ದೇಶ್ವರ ನಿರಾಶ್ರಿತರ ಕೇಂದ್ರಕ್ಕೆ ತೆರಳುತ್ತಿದ್ದ ವೇಳೆ ಕಿರಣ್ ರಾಜ್ ಚಲಾಯಿಸುತ್ತಿದ್ದ ಮರ್ಸಿಡಿಸ್ ಬೆಂಜ್ ಕಾರು ಅಪಘಾತಕ್ಕೀದಾಗಿದೆ. ಕಿರಣ್ ರಾಜ್ ಎಡೆಯ ಭಾಗಕ್ಕೆ ಗಂಭೀರ ಪೆಟ್ಟಾಗಿದ್ದು, ಅವರನ್ನು ಕೆಂಗೇರಿ ಬಳಿಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸದ್ಯ ಕಿರಣ್ ರಾಜ್ ಅವರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತದಲ್ಲಿ ಕಾರಿನ ಒಂದು ಭಾಗಕ್ಕೆ ಹಾನಿಯಾಗಿದೆ ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಿರಣ್ ರಾಜ್ ಅಭಿನಯದ ‘ರಾನಿ’ ಸಿನಿಮಾ ಈವಾರ ಬಿಡುಗಡೆಯಾಗಬೇಕಿತ್ತು. ಇದೇ ಸಂದರ್ಭದಲ್ಲಿ ಅವರ ಕಾರು ಅಪಘಾತವಾಗಿದ್ದು, ನಟ ಗಂಭೀರವಾಗಿ ಗಾಯಗೊಂಡಿದ್ದಾರೆ.

 

For Latest News Updates, Join Our Whatsapp Community🚩
RELATED ARTICLES

Most Popular