ಮೈಸೂರು : ಕಲುಷಿತ ನೀರು ಸೇವಿಸಿ ಓರ್ವ ಮೃತಪಟ್ಟು, 12 ಮಂದಿ ಅಸ್ವಸ್ಥಗೊಂಡ ಘಟನೆ ಸಾಲಿಗ್ರಾಮ ತಾಲೂಕಿನ ಬೆಟ್ಟಹಳ್ಳಿಯಲ್ಲಿ ನಡೆದಿದೆ.
ಕಲುಷಿತ ನೀರು ಸೇವಿಸಿ ಈ ಘಟನೆ ನಡೆದಿದ್ದು, ಅಸ್ವಸ್ಥಗೊಂಡವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ವಾಂತಿ ಭೇದಿಯಿಂದ ಬಳಲುತ್ತಿದ್ದ ಗೋವಿಂದೇಗೌಡ (62) ಎಂಬುವವರು ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಟ್ಯಾಂಕರ್ ನೀರು ಸೇವಿಸಿ ಗ್ರಾಮದ ಜನರು ಅಸ್ವಸ್ಥಗೊಂಡಿದ್ದರು. ಹಾಸನ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗೋವಿಂದೇಗೌಡ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಘಟನೆ ನಡೆದ ಸ್ಥಳಕ್ಕೆ ಆರೋಗ್ಯಾಧಿಕಾರಿಗಳು ಭೇಟಿ ನೀಡಿ ತಪಾಸಣೆ ನಡೆಸಿದ್ದಾರೆ.