HomeKarnatakaನಿರುದ್ಯೋಗಿಗಳಿಗೆ ಗುಡ್ ನ್ಯೂಸ್ :  ಹೈನುಗಾರಿಕೆ, ಕುರಿ, ಕೋಳಿ ಸಾಕಾಣಿಕೆ ತರಬೇತಿಗೆ ಅರ್ಜಿ ಆಹ್ವಾನ

ನಿರುದ್ಯೋಗಿಗಳಿಗೆ ಗುಡ್ ನ್ಯೂಸ್ :  ಹೈನುಗಾರಿಕೆ, ಕುರಿ, ಕೋಳಿ ಸಾಕಾಣಿಕೆ ತರಬೇತಿಗೆ ಅರ್ಜಿ ಆಹ್ವಾನ

ದಾವಣಗೆರೆ : ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ವತಿಯಿಂದ ನಗರದ ಪಶು ಆಸ್ಪತ್ರೆ ಆವರಣದಲ್ಲಿರುವ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಸೆಪ್ಟೆಂಬರ್ 12, 13, ಮತ್ತು 25, 26 ರಂದು ಆಧುನಿಕ ಹೈನುಗಾರಿಕೆ ಸೆ. 17 ಮತ್ತು 18 ರಂದು ಕೋಳಿ ಸಾಕಾಣಿಕೆ, ಸೆ. 20 ಮತ್ತು 21 ರಂದು ಕುರಿ ಮೇಕೆ ಸಾಕಾಣಿಕೆ, ಹಾಗೂ ತರಬೇತಿಯನ್ನು ಆಯೋಜಿಸಲಾಗಿದೆ.

ತರಬೇತಿಗೆ ಹಾಜರಾಗುವ ರೈತರು ಆಧಾರ್ ಕಾರ್ಡ್ ಜೆರಾಕ್ಸ್, 2 ಪಾಸ್ ಪೋರ್ಟ್ ಸೈಜ್ ಫೋಟೋ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಜಾತಿ ಪ್ರಮಾಣ ಪತ್ರ ಜೆರಾಕ್ಸ್ ತರಬೇಕು. ತರಬೇತಿಯಲ್ಲಿ ಯಾವುದೇ ಪ್ರೋತ್ಸಾಹಧನ ಮತ್ತು ಭತ್ಯೆಗಳನ್ನು ನೀಡಲಾಗುವುದಿಲ್ಲ.

ಹೆಚ್ಚಿನ ಮಾಹಿತಿಗಾಗಿ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ ದಾವಣಗೆರೆ ದೂ. 08192-233787 ಗೆ ಸಂಪರ್ಕಿಸಬಹುದೆಂದು ಮುಖ್ಯ ಪಶು ವೈದ್ಯಾಧಿಕಾರಿಗಳು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular