HomeIndiaBIG BREAKING: 5 ಲಕ್ಷದವರೆಗೆ ಉಚಿತ ಚಿಕಿತ್ಸೆ: 70 ವರ್ಷ ಮೇಲ್ಪಟ್ಟವರಿಗೆ ‘ಆಯುಷ್ಮಾನ್ ಭಾರತ್’ ವಿಸ್ತರಣೆ

BIG BREAKING: 5 ಲಕ್ಷದವರೆಗೆ ಉಚಿತ ಚಿಕಿತ್ಸೆ: 70 ವರ್ಷ ಮೇಲ್ಪಟ್ಟವರಿಗೆ ‘ಆಯುಷ್ಮಾನ್ ಭಾರತ್’ ವಿಸ್ತರಣೆ

ನವದೆಹಲಿ: 70 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಆಯುಷ್ಮಾನ್ ಭಾರತ್ ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆಯಡಿ 5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ ನೀಡುವುದಾಗಿ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರವನ್ನು ಪ್ರಕಟಿಸಿದೆ.

ಕ್ಯಾಬಿನೆಟ್ ಸಭೆಯ ನಂತರ, ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಮಾತನಾಡಿ, 70 ವರ್ಷಕ್ಕಿಂತ ಮೇಲ್ಪಟ್ಟ ಹಿರಿಯ ನಾಗರಿಕರನ್ನು ಸಾರ್ವತ್ರಿಕ ಆರೋಗ್ಯ ವ್ಯಾಪ್ತಿ, ಆಯುಷ್ಮಾನ್ ಭಾರತ್ ಪಿಎಂ ಜನ ಆರೋಗ್ಯ ಯೋಜನೆ ಅಡಿಯಲ್ಲಿ ಒಳಗೊಳ್ಳಲು ಕೇಂದ್ರ ನಿರ್ಧರಿಸಿದೆ ಎಂದು ಹೇಳಿದರು.

ಇದೊಂದು ದೊಡ್ಡ ನಿರ್ಧಾರ. ಈ ನಿರ್ಧಾರದಲ್ಲಿ ಮಾನವೀಯ ಚಿಂತನೆ ಇದೆ. ಅವರಿಗೆ 5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆಯ ಸೌಲಭ್ಯ ಸಿಗಲಿದೆ ಮತ್ತು ಇದು ದೇಶದ ಸುಮಾರು 4.5 ಕೋಟಿ ಕುಟುಂಬಗಳನ್ನು ಒಳಗೊಳ್ಳುತ್ತದೆ, ಇದರಲ್ಲಿ ಸುಮಾರು 6 ಕೋಟಿ ಹಿರಿಯರು ಸೇರಿದ್ದಾರೆ. ಸರ್ಕಾರ ಆಯುಷ್ಮಾನ್ ಭಾರತ್ ವ್ಯಾಪ್ತಿಯನ್ನು ವಿಸ್ತರಿಸುವುದರಿಂದ 70 ವರ್ಷಕ್ಕಿಂತ ಮೇಲ್ಪಟ್ಟ ಹಿರಿಯ ನಾಗರಿಕರು 5 ಲಕ್ಷದವರೆಗೆ ಉಚಿತ ಚಿಕಿತ್ಸೆ ಪಡೆಯುತ್ತಾರೆ ಎಂದು ಅವರು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular