HomeKarnatakaಯುವ ಜನತೆಗೆ ಗುಡ್ ನ್ಯೂಸ್: ವಿವಿಧ ಯೋಜನೆಗಳಡಿ ಸಾಲ ಸೌಲಭ್ಯಕ್ಕೆ ಅರ್ಜಿ

ಯುವ ಜನತೆಗೆ ಗುಡ್ ನ್ಯೂಸ್: ವಿವಿಧ ಯೋಜನೆಗಳಡಿ ಸಾಲ ಸೌಲಭ್ಯಕ್ಕೆ ಅರ್ಜಿ

ಬೆಂಗಳೂರು: ಡಾ.ಬಿ.ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮ ನಿಯಮಿತ ವತಿಯಿಂದ  2024-25ನೇ ಸಾಲಿಗೆ ಸ್ವಯಂ ಉದ್ಯೋಗ (ನೇರಸಾಲ) ಯೋಜನೆ, ಉದ್ಯಮ ಶೀಲತಾ ಅಭಿವೃದ್ಧಿ ಯೋಜನೆ, ಮೈಕ್ರೋ ಕ್ರೆಡಿಟ್(ಪ್ರೇರಣಾ) ಯೋಜನೆ ಮತ್ತು ಗಂಗಾ ಕಲ್ಯಾಣ ಯೋಜನೆಯಡಿಯಲ್ಲಿ ಸಾಲ ಸೌಲಭ್ಯ ಪಡೆಯಲು ಅರ್ಹ ಪರಿಶಿಷ್ಟ ಜಾತಿಗೆ ಸೇರಿದ  ನಿರುದ್ಯೋಗಿ  ಯುವಕ / ಯುವತಿಯರಿಂದ  ಆನ್ ಲೈನ್ ಮೂಲಕ ಅರ್ಜಿಗಳನ್ನು  ಆಹ್ವಾನಿಸಲಾಗಿದೆ.

ಆಸಕ್ತರು ಸೇವ ಸಿಂಧು ಪೊರ್ಟಲ್ http://sevasindhu.karnataka.gov.in ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್ ಲೈನ್ ಮೂಲಕ ಅರ್ಜಿಗಳನ್ನು ಅಕ್ಟೋಬರ್ 10ರೊಳಗೆ ಸಲ್ಲಿಸಬಹುದು. 2023-24ನೇ ಸಾಲಿನಲ್ಲಿ ಆನ್ ಲೈನ್  ಮುಖಾಂತರ  ಅರ್ಜಿ ಸಲ್ಲಿಸಿರುವವರು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅವ್ಯಶಕತೆ ಇರುವುದಿಲ್ಲ.

ನಿಗಮದ ವ್ಯಾಪ್ತಿಗೆ ಒಳಪಡುವ ಉಪಜಾತಿ ಹಾಗೂ ಯೋಜನೆಗಳ ಷರತ್ತು ನಿಬಂಧನೆಗಳಿಗೆ ಒಳಪಡುವ  ಫಲಾಪೇಕ್ಷಿಗಳು ಮಾತ್ರ ಅರ್ಜಿ ಸಲ್ಲಿಸಬಹುದು. ಈ ಹಿಂದೆ ನಿಗಮದಿಂದ ಸೌಲಭ್ಯ ಪಡೆದರುವ ಫಲಾನುಭವಿಗಳು ಅರ್ಜಿ ಸಲ್ಲಿಸಲು ನಿಯಮಗಳನ್ವಯ ಅವಕಾಶವಿರುವುದಿಲ್ಲ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರು, ಡಾ.ಬಿ.ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮ ನಿಯಮಿತ, ಬೆಂಗಳೂರು ನಗರ ಜಿಲ್ಲೆ, #21, ವೆಂಕಟಪ್ಪ ರಸ್ತೆ, ಕ್ವೀನ್ಸ್ ರಸ್ತೆ, ಟಸ್ಕರ್ ಟೌನ್, ಬೆಂಗಳೂರು-560 051 ಅಥವಾ ಕಲ್ಯಾಣ ಮಿತ್ರ ಏಕೀಕೃತ ಎಸ್.ಸಿ / ಎಸ್.ಟಿ ಸಹಾಯವಾಣಿ ಸಂಖ್ಯೆ : 9482300400 ಗೆ ಸಂಪರ್ಕಿಸಬಹುದು ಎಂದು   ಬೆಂಗಳೂರು ನಗರ ಜಿಲ್ಲೆ, ಡಾ.ಬಿ.ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮ ನಿಯಮಿತದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular