HomeKarnatakaನಾಗಮಂಗಲದಲ್ಲಿ ಗಣಪತಿ ಮೆರವಣಿಗೆ ವೇಳೆ ಕಲ್ಲು ತೂರಾಟ: ಅಂಗಡಿ, ವಾಹನಗಳಿಗೆ ಬೆಂಕಿ: ಪರಿಸ್ಥಿತಿ ಉದ್ವಿಗ್ನ, ಸೆಕ್ಷನ್...

ನಾಗಮಂಗಲದಲ್ಲಿ ಗಣಪತಿ ಮೆರವಣಿಗೆ ವೇಳೆ ಕಲ್ಲು ತೂರಾಟ: ಅಂಗಡಿ, ವಾಹನಗಳಿಗೆ ಬೆಂಕಿ: ಪರಿಸ್ಥಿತಿ ಉದ್ವಿಗ್ನ, ಸೆಕ್ಷನ್ 144 ಜಾರಿ

ಮಂಡ್ಯ: ಮಂಡ್ಯ ಜಿಲ್ಲೆಯ ನಾಗಮಂಗಲ ಪಟ್ಟಣದಲ್ಲಿ ಗಣಪತಿ ವಿಸರ್ಜನೆ ಮೆರವಣಿಗೆ ವೇಳೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಇದರಿಂದಾಗಿ ಪರಿಸ್ಥಿತಿ ಉದ್ವಿಗ್ನಗೊಂಡಿದ್ದು ಪೊಲೀಸರು ನಾಲ್ಕೈದು ಬಾರಿ ಲಾಠಿ ಪ್ರಹಾರ ನಡೆಸಿದ್ದಾರೆ.

ಸೆಪ್ಟಂಬರ್ 14ರವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ನಾಗಮಂಗಲದ ಟಿಬಿ ಬಡಾವಣೆಯ ಬದರಿ ಕೊಪ್ಪಲಿನ ಗಜ ಪಡೆ ಯುವಕರ ಸಂಘದಿಂದ ಪ್ರತಿಷ್ಠಾಪಿಸಿದ್ದ ಗಣಪತಿ ಮೂರ್ತಿಯನ್ನು ವಿಸರ್ಜನೆ ಪೂರ್ವ ಮೆರವಣಿಗೆ ವೇಳೆ ಘಟನೆ ನಡೆದಿದೆ.

ಜಾನಪದ ಕಲಾತಂಡಗಳೊಂದಿಗೆ ಮೆರವಣಿಗೆ ತಾಲೂಕು ಕಚೇರಿ ಸಮೀಪ ಮಂಡ್ಯ ಸರ್ಕಲ್ ಗೆ ಆಗಮಿಸಿದಾಗ ಕಿಡಿಗೇಡಿಗಳು ಮೆರವಣಿಗೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಬಾಟಲಿ, ಕಲ್ಲುಗಳನ್ನು ತೂರಲಾಗಿದ್ದು, ಅಂಗಡಿ, ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ. ಅನ್ನಕೋಮಿನವರ ಗುಂಪು ಮೆರವಣಿಗೆ ನಡೆಸುತ್ತಿದ್ದವರ ಮೇಲೆ ಕಲ್ಲುಗಳಿಂದ ತೀವ್ರ ಹಲ್ಲೆ ನಡೆಸಿದ್ದು, ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು ಪ್ರತಿ ದಾಳಿ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಂಗಡಿ, ವಾಹನಗಳಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲಾಗಿದೆ. ಗಲಾಟೆ ಕೋಮು ಗಲಭೆಗೆ ತಿರುಗಿದ್ದು, ಹೆಚ್ಚಿನ ಸಂಖ್ಯೆಯ ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿದೆ. ಶಾಂತಿಯುತ ಮೆರವಣಿಗೆ ನಡೆಯುತ್ತಿದ್ದ ವೇಳೆ ಕಲ್ಲು ತೂರಾಟ ನಡೆಸಿದ ಕಿಡಗೇಡಿಗಳನ್ನು ಬಂಧಿಸುವಂತೆ ಒತ್ತಾಯಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular