HomeAutoವೇಗವಾಗಿ ನುಗ್ಗಿ ಬಂದ ಕಾರ್ ಡಿಕ್ಕಿಯಾಗಿ ಗಾಳಿಯಲ್ಲಿ ಹಾರಿ ಬಿದ್ದ ಮಹಿಳೆ; ಎದೆ ಝಲ್ ಎನಿಸುತ್ತೆ...

ವೇಗವಾಗಿ ನುಗ್ಗಿ ಬಂದ ಕಾರ್ ಡಿಕ್ಕಿಯಾಗಿ ಗಾಳಿಯಲ್ಲಿ ಹಾರಿ ಬಿದ್ದ ಮಹಿಳೆ; ಎದೆ ಝಲ್ ಎನಿಸುತ್ತೆ ‘ವಿಡಿಯೋ’

ಕಸ ವಿಲೇವಾರಿ ಮಾಡಿ ಮನೆಗೆ ಮರಳುತ್ತಿದ್ದ ಮಹಿಳೆಯೊಬ್ಬರಿಗೆ ಅತಿ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಘಟನೆ ಉತ್ತರ ಪ್ರದೇಶದ ಅಮ್ರೋಹಾದಲ್ಲಿ ನಡೆದಿದೆ. ಘಟನೆಯ ಭಯಾನಕ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ.

ಸಾಮಾಜಿಕ ಜಾಲತಾಣದಲ್ಲಿ ಬಿಡುಗಡೆಯಾಗಿರುವ ವಿಡಿಯೋದಲ್ಲಿ ಕಾರ್ ಡಿಕ್ಕಿ ಹೊಡೆದ ರಭಸಕ್ಕೆ ಮಹಿಳೆ ಗಾಳಿಯಲ್ಲಿ ಹಾರಿ ಬಹಳ ದೂರ ಬಿದ್ದಿದ್ದಾರೆ.

ವರದಿಗಳ ಪ್ರಕಾರ ಸ್ಥಳೀಯ ನಿವಾಸಿಗಳು ತಕ್ಷಣ ಮಹಿಳೆಯನ್ನು ಆಸ್ಪತ್ರೆಗೆ ಸಾಗಿಸಿದರು, ನಂತರ ಗಂಭೀರ ಸ್ಥಿತಿಯಲ್ಲಿದ್ದ ಅವರನ್ನು ಮತ್ತೊಂದು ಆಸ್ರತ್ರೆಗೆ ರವಾನಿಸಲಾಯಿತು. ಸದ್ಯ ಅವರು ಮೊರಾದಾಬಾದ್‌ನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಏತನ್ಮಧ್ಯೆ ಮಹಿಳೆಗೆ ಡಿಕ್ಕಿ ಹೊಡೆದು ವಾಹನ ನಿಲ್ಲಿಸದೆ ಪರಾರಿಯಾಗಿರುವ ಚಾಲಕನಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದು ಅದಕ್ಕಾಗಿ ಪ್ರತ್ಯೇಕ ತಂಡ ರಚಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular