ಮಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಕೃತಕ ಬುದ್ಧಿಮತ್ತೆ ತಂತ್ರಜ್ಞಾನ ಬಳಸಿ ಹಿಂದೂ ದೇವತೆಗಳ ಅವಹೇಳನಕಾರಿ, ಅಶ್ಲೀಲ ಫೋಟೋ ಪೋಸ್ಟ್ ಮಾಡಿದ್ದು, ಈ ಬಗ್ಗೆ ಮಂಗಳೂರಿನ ಉರ್ವ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಅಭಿವ್ಯಕ್ತಿ ಸ್ವಾತಂತ್ರ್ಯ ಎಂದು ಬರೆದ ಫ್ಯಾಕ್ಟ್ ವಿಡ್ ಫೇಸ್ ಬುಕ್ ಪೇಜ್ ನಲ್ಲಿ ಪ್ರತಿದಿನ ತಂತ್ರಜ್ಞಾನ ಬಳಸಿ ಹಿಂದೂ ದೇವತೆಗಳ ಅವಹೇಳನಕಾರಿ, ಅಶ್ಲೀಲ ಫೋಟೋ ಪೋಸ್ಟ್ ಮಾಡಲಾಗುತ್ತಿದೆ. ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ ಫೋಟೋಗಳನ್ನು ಪ್ರತಿದಿನ ಈ ಪೇಜ್ ನಲ್ಲಿ ಪೋಸ್ಟ್ ಮಾಡುತ್ತಿದ್ದು, ಇದು ಹಿಂದೂಗಳನ್ನು ಕೆರಳಿಸುವ ಷಡ್ಯಂತ್ರವಾಗಿದೆ ಎಂದು ಹಿಂದೂ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ.
ಇಂತ ಪೋಟೋ ಪೋಸ್ಟ್ ಮಾಡುವ ಫ್ಯಾಕ್ಟ್ ವಿಡ್ ಫೇಸ್ ಬುಕ್ ಪೇಜ್ ಅಡ್ಮಿನ್, ಕಾಮೆಂಟ್ ಹಾಕುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ವಕೀಲರ ಒಕ್ಕೂಟ, ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಮಂಗಳೂರಿನ ಸೈಬರ್ ಕ್ರೈಂ ವಿಭಾಗಕ್ಕೆ ದೂರು ನೀಡಲಾಗಿದೆ.