2024-25 ನೇ ಸಾಲಿನ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಹನಿ ನೀರಾವರಿ ಯೋಜನೆಯನ್ನು ಅನುಷ್ಟಾನಗೊಳಿಸುತ್ತಿದ್ದು ಆಸಕ್ತ ತೋಟಗಾರಿಕೆ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಸಾಮಾನ್ಯ ರೈತರಿಗೆ 5 ಎಕರೆ ವರೆಗೆ ಶೇಕಡಾ 90 ರಷ್ಟು ಹಾಗೂ 5 ಎಕರೆ ಮೇಲ್ಪಟ್ಟ ಜಮೀನಿಗೆ ಶೇಕಡಾ 45 ರಷ್ಟು ಸಹಾಯಧನ ನೀಡಲಾಗುವುದು.
ಎಲ್ಲ ವರ್ಗದ ರೈತರಿಗೆ 12 ಎಕರೆ 20 ಗುಂಟೆ ವರೆಗೆ ಸಹಾಯಧನ ನೀಡಲಾಗುವುದು ಆದರೆ ತರಕಾರಿ ಮತ್ತು ಹೂ ಬೆಳೆಗಳಿಗೆ 5 ಎಕರೆ ಪ್ರದೇಶಕ್ಕೆ ಮಾತ್ರ ಸಹಾಯಧನ ನೀಡಲಾಗುವದು.
ಹೆಚ್ಚಿನ ಮಾಹಿತಿಗಾಗಿ ಅಮ್ಮಿನಭಾವಿಯ ಸಹಾಯಕ ತೋಟಗಾರಿಕೆ ಅಧಿಕಾರಿ ಮಹೇಶ ಪಟ್ಟಣಶೆಟ್ಟಿ (9916114535), ಗರಗ ಸಹಾಯಕ ತೋಟಗಾರಿಕೆ ಅಧಿಕಾರಿ ಲಕ್ಷ್ಮೀ ಕುರಬೇಟ್ಟ (7353674533), ಧಾರವಾಡದ ಸಹಾಯಕ ತೋಟಗಾರಿಕೆ ಅಧಿಕಾರಿ ಮಹಾಂತೇಶ ಯಮಕನಮರಡಿ (8310143782) ಹಾಗೂ ಅಳ್ಳಾವರದ ಸಹಾಯಕ ತೋಟಗಾರಿಕೆ ಅಧಿಕಾರಿ ದೀಪ್ತಿ ವಾಲಿ (8310143782) ಅವರನ್ನು ಸಂಪರ್ಕಿಸಬಹುದು ಅಥವಾ ತೋಟಗಾರಿಕೆ ಇಲಾಖೆ ಕಚೇರಿಗೆ ಬೇಟಿ ನೀಡಬಹುದು ಎಂದು ತೋಟಗಾರಿಕಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.