ಬೆಂಗಳೂರು : ರಾಜ್ಯದ 373 ಪ್ರಾಥಮಿಕ ಶಾಲೆಗಳಲ್ಲಿ ‘ಆಂಗ್ಲ ಮಾಧ್ಯಮ’ ತರಗತಿ ಆರಂಭ ಮಾಡಲು ‘ರಾಜ್ಯ ಸರ್ಕಾರದ ಅಧಿಕೃತ ಆದೇಶ ಹೊರಡಿಸಿದೆ.
ರಾಜ್ಯದಲ್ಲಿ 2000 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಹಾಲಿ ಇರುವ ಕನ್ನಡ/ಇತರೆ ಮಾಧ್ಯಮದ ಜೊತೆಗೆ ಆಂಗ್ಲ ಮಾಧ್ಯಮ (ದ್ವಿಭಾಷಾ) ಶಾಲೆಗಳನ್ನು ಪ್ರಾರಂಭಿಸಲು ಘೋಷಿಸಿದ ಹಿನ್ನೆಲೆಯಲ್ಲಿ ಸರ್ಕಾರವು ಉಲ್ಲೇಖ-1ರನ್ನಯ ಮೊದಲನೇ ಹಂತದಲ್ಲಿ 1419 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಹಾಲಿ ಇರುವ ಕನ್ನಡ/ಇತರ ಮಾಧ್ಯಮದ ಜೊತೆಯಲ್ಲಿ ದ್ವಿಭಾಷಾ ಮಾಧ್ಯಮ ಶಾಲೆಗಳನ್ನು ಪ್ರಾರಂಭಿಸಲು ಅನುಮತಿಸಿ ಆದೇಶಿಸಿರುತ್ತದೆ. ಅದರಂತೆ ಈಗಾಗಲೇ ರಾಜ್ಯದ್ಯಂತ 1419 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ದ್ವಿಭಾಷಾ ಮಾಧ್ಯಮ ಶಾಲೆಗಳನ್ನು ಪ್ರಾರಂಭಿಸಿ ಅನುಷ್ಠಾನಗೊಳಿಸಲಾಗಿರುತ್ತದೆ.
ಪ್ರಸ್ತುತ ಎರಡನೇ ಹಂತದಲ್ಲಿ ರಾಜ್ಯಾದ್ಯಂತ 373 ಸರ್ಕಾರಿ ಪ್ರಾಥಮಿಕ ಶಾಲೆಗಳನ್ನು ಗುರುತಿಸಿ ಒಂದನೇ ತರಗತಿಯಿಂದ ಹಾಲಿ ನಡೆಯುತ್ತಿರುವ ಕನ್ನಡ / ಇತರೆ ಮಾಧ್ಯಮದ ಜೊತೆಗೆ ಹೊಸದಾಗಿ ಆಂಗ್ಲ [ದ್ವಿಭಾಷಾ (Bilingual)) ಮಾಧ್ಯಮ ತರಗತಿಗಳನ್ನು ಪ್ರಾರಂಭಿಸುವ ಸಂಬಂಧ ಉಲ್ಲೇಖ-2ರ ಯ ಏಕಕಡತದ ಮೂಲಕ ಸರ್ಕಾರದ ಅನುಮೋದನೆ ಕೋರಲಾಗಿರುತ್ತದೆ.
ಅದರಂತೆ ಸರ್ಕಾರವು 2024-25ನೇ ಸಾಲಿನಿಂದ ಉಲ್ಲೇಖಿತ-3ರ ಆದೇಶದ ಅನುಬಂಧದಲ್ಲಿನ 373 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ 1 ನೇ ತರಗತಿಯಿಂದ ಹಾಲಿ ನಡೆಯುತ್ತಿರುವ ಕನ್ನಡ / ಇತರೆ ಮಾಧ್ಯಮದ ಜೊತೆಗೆ ಹೊಸದಾಗಿ ಆಂಗ್ಲ [ದ್ವಿಭಾಷಾ (Bilingual)) ಮಾಧ್ಯಮ ತರಗತಿಗಳನ್ನು ಸ್ಥಳೀಯವಾಗಿ ಲಭ್ಯವಿರುವ ಸಂಪನ್ಮೂಲಗಳನ್ನು ಬಳಸಿಕೊಂಡು ಪ್ರಾರಂಭಿಸಲು ಸರ್ಕಾರದ ಆದೇಶ ಸಂಖ್ಯೆ: ಇಡಿ 109 ಯೋಯೋಕ 2018 ದಿನಾಂಕ: 18.05.2019 ರಲ್ಲಿನ ಷರತ್ತುಗಳಿಗೊಳಪಟ್ಟು ಅನುಮತಿಸಿ ಆದೇಶಿಸಲಾಗಿರುತ್ತದೆ. (ಪತಿಗಳನ್ನು ಲಗತ್ತಿಸಿದೆ).
ಸದರಿ ಆದೇಶದಲ್ಲಿನ ಅಂಶಗಳನ್ನಯ ಸಮರ್ಪಕವಾಗಿ ಅನುಷ್ಠಾನಗೊಳಿಸಲು ಕೂಡಲೇ ನಿಯಮಾನುಸಾರ ಅಗತ್ಯ ಕ್ರಮಗಳನ್ನು ವಹಿಸುವಂತೆ ಸಂಬಂಧಿಸಿದ ಇಲಾಖಾಧಿಕಾರಿಗಳಿಗೆ ಈ ಮೂಲಕ ತಿಳಿಸಲಾಗಿದೆ.