HomeKarnatakaBIG NEWS : ನಮ್ಮ ಸರ್ಕಾರ ಇರುವವರೆಗೂ 'ಪಂಚ ಗ್ಯಾರಂಟಿ' ಯೋಜನೆಗಳು ಮುಂದುವರೆಯಲಿವೆ : 'CM...

BIG NEWS : ನಮ್ಮ ಸರ್ಕಾರ ಇರುವವರೆಗೂ ‘ಪಂಚ ಗ್ಯಾರಂಟಿ’ ಯೋಜನೆಗಳು ಮುಂದುವರೆಯಲಿವೆ : ‘CM ಸಿದ್ದರಾಮಯ್ಯ’ ಮರು ಸ್ಪಷ್ಟನೆ

ಬೆಂಗಳೂರು : ನಮ್ಮ ಸರ್ಕಾರ ಇರುವವರೆಗೂ ಗ್ಯಾರಂಟಿ ಯೋಜನೆಗಳು ಮುಂದುವರೆಯಲಿವೆ ಎಂದು ಸಿಎಂ ಸಿದ್ದರಾಮಯ್ಯ ಮರು ಸ್ಪಷ್ಟನೆ ನೀಡಿದ್ದಾರೆ.

ವಿಧಾನಸೌಧ ಆವರಣದಲ್ಲಿ ಸಾರಿಗೆ ಇಲಾಖೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 100 ನೂತನ ಬಿಎಂಟಿಸಿ ಬಸ್ ಗಳನ್ನು ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು.

ಇದೇ ಶ್ರಮಿಕ ವರ್ಗದ ಅನುಕೂಲಕ್ಕಾಗಿ ಶಕ್ತಿ ಯೋಜನೆ ಸೇರಿದಂತೆ ಐದೂ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿ ಯಶಸ್ವಿಯಾಗಿ ಮುಂದುವರೆಸುತ್ತಿದ್ದೇವೆ. ನಮ್ಮ ಸರ್ಕಾರ ಇರುವವರೆಗೂ ಗ್ಯಾರಂಟಿ ಯೋಜನೆಗಳು ಮುಂದುವರೆಯಲಿವೆ. ಬಡವರ ಮತ್ತು ಮಧ್ಯಮ ವರ್ಗದ ವಿರೋಧಿಯಾಗಿರುವ ಬಿಜೆಪಿ ಈ ಗ್ಯಾರಂಟಿ ಯೋಜನೆಗಳ ವಿರುದ್ಧ ಅಪಪ್ರಚಾರ ಮಾಡುತ್ತಿದೆ. ಈ ಅಪಪ್ರಚಾರಕ್ಕೆ ಕಿವಿಗೊಡಬೇಡಿ. ಈ ಗ್ಯಾರಂಟಿಗಳು ಇನ್ನಷ್ಟು ಪರಿಣಾಮಕಾರಿಯಾಗಿ ಜಾರಿ ಆಗಲಿವೆ. ಗೃಹಲಕ್ಷ್ಮಿ ಹಣದಿಂದ ಸಾವಿರಾರು ಕುಟುಂಬಗಳು ನಾನಾ ರೀತಿಯ ಅನುಕೂಲಗಳನ್ನು ಒದಗಿಸಿಕೊಳ್ಳುತ್ತಿರುವ ಬಗ್ಗೆ ಪ್ರತಿದಿನ ಮಾಧ್ಯಮಗಳು ತೋರಿಸುತ್ತಿವೆ. ನಾವು ಬಡವರಿಗೆ ಅಕ್ಕಿ ಕೊಡುವ ಯೋಜನೆಗೆ ಮುಂದಾದರೆ ಕೇಂದ್ರ ಸರ್ಕಾರ ನಮಗೆ ಅಕ್ಕಿ ಕೊಡದೆ ತೊಂದರೆ ನೀಡಿತು. ಆದರೆ ನಾವು ಅಕ್ಕಿಯ ಬದಲಿಗೆ, ಅಕ್ಕಿಯ ಹಣವನ್ನು ಜನರಿಗೆ ನೀಡಿ ನುಡಿದಂತೆ ನಡೆದಿದ್ದೇವೆ. ರಾಜ್ಯದ ಪ್ರತೀ ಕುಟುಂಬಗಳಿಗೆ ಪ್ರತೀ ತಿಂಗಳಿಗೆ 4-5 ಸಾವಿರ ರೂಪಾಯಿ ಅನುಕೂಲ ಆಗುತ್ತಿದೆ. ಇದರಿಂದ ಲಕ್ಷಾಂತರ ಕುಟುಂಬಗಳಿಗೆ ಆರ್ಥಿಕ ಶಕ್ತಿ ನೀಡಿದ್ದೇವೆ. ನಮ್ಮ ಸರ್ಕಾರ ಬಂದ ಮೇಲೆ ನಾಲ್ಕು ಬಾರಿ ಹೊಸ ಬಸ್ ಗಳನ್ನು ಖರೀದಿಸಿ ಸವಲತ್ತು ಒದಗಿಸಿದ್ದೇವೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular