ಬೆಂಗಳೂರು: ರಾಜ್ಯದಲ್ಲಿ 402 ಪೊಲೀಸ್ ಸಬ್ ಇನ್ ಸ್ಪೆಕ್ಟರ್ ಹುದ್ದೆಗಳ ನೇಮಕಾತಿಗೆ ಸೆ. 22ರಂದು ನಿಗದಿಯಾಗಿದ್ದ ಪರೀಕ್ಷೆಯನ್ನು ಮುಂದೂಡಲಾಗಿದೆ.
ಮುಂದೂಡಿದ ಪರೀಕ್ಷೆಯನ್ನು ಈ ಮೊದಲು ಸೆ. 28 ರಂದು ನಡೆಸುವುದಾಗಿ ಹೇಳಲಾಗಿತ್ತು. ಆದರೆ, ಅಕ್ಟೋಬರ್ 3ರ ಗುರುವಾರ ಪಿಎಸ್ಐ ನೇಮಕಾತಿ ಪರೀಕ್ಷೆ ನಡೆಯಲಿದೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ವತಿಯಿಂದ ಸೆ. 22ರಂದು ಪಿಎಸ್ಐ ಪರೀಕ್ಷೆಗೆ ದಿನಾಂಕ ನಿಗದಿಪಡಿಸಲಾಗಿತ್ತು. ಅದೇ ದಿನದಲ್ಲಿ ಕೇಂದ್ರ ಲೋಕಸೇವಾ ಆಯೋಗದ ಮುಖ್ಯ ಪರೀಕ್ಷೆ ನಡೆಯುವ ಹಿನ್ನೆಲೆಯಲ್ಲಿ ಪಿಎಸ್ಐ ಪರೀಕ್ಷೆ ಮುಂದೂಡುವಂತೆ ನೂರಾರು ಅಭ್ಯರ್ಥಿಗಳು ಮನವಿ ಮಾಡಿದ್ದರು. ಬಿಜೆಪಿಯಿಂದಲೂ ಪಿಎಸ್ಐ ನೇಮಕಾತಿ ಪರೀಕ್ಷೆ ದಿನಾಂಕ ಮುಂದೂಡಲು ಮನವಿ ಮಾಡಲಾಗಿತ್ತು.
ಇದನ್ನು ಪರಿಗಣಿಸಿ ಅ. 3ರಂದು ಪಿಎಸ್ಐ ಪರೀಕ್ಷೆ ನಡೆಸಲು ನಿರ್ಧಾರ ಕೈಗೊಳ್ಳಲಾಗಿದ್ದು, ಒಂದೆರಡು ದಿನಗಳಲ್ಲಿ ಅಧಿಕೃತವಾಗಿ ಹೊಸ ದಿನಾಂಕ ಪ್ರಕಟಿಸಲಾಗುವುದು ಎಂದು ಹೇಳಲಾಗಿದೆ.