HomeKarnatakaಅಳಿವಿನಂಚಿನಲ್ಲಿರುವ ನಕ್ಷತ್ರ ಆಮೆಗಳನ್ನು ಅಕ್ರಮವಾಗಿ ಮಾರಾಟಕ್ಕೆ ಸಾಗಿಸುತ್ತಿದ್ದ ಮೂವರು ಅರೆಸ್ಟ್

ಅಳಿವಿನಂಚಿನಲ್ಲಿರುವ ನಕ್ಷತ್ರ ಆಮೆಗಳನ್ನು ಅಕ್ರಮವಾಗಿ ಮಾರಾಟಕ್ಕೆ ಸಾಗಿಸುತ್ತಿದ್ದ ಮೂವರು ಅರೆಸ್ಟ್

ಚಾಮರಾಜನಗರ: ಅಳಿವಿನಂಚಿನಲ್ಲಿರುವ ನಕ್ಷತ್ರ ಆಮೆಗಳನ್ನು ಅಕ್ರಮವಾಗಿ ಮಾರಾಟ ಮಾಡಲು ಸಾಗಿಸುತ್ತಿದ್ದ ಮೂವರು ಆರೋಪಿಗಳನ್ನು ಕೊಳ್ಳೇಗಾಲ ಪೋಲೀಸರು ಹಾಗೂ ಅರಣ್ಯ ಸಂಚಾರಿ ದಳ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.

ಹನೂರು ತಾಲೂಕಿನ ಗುಂಡಿಮಾಳ ಗ್ರಾಮದ ಪ್ರಕಾಶ್(38), ಮಳವಳ್ಳಿ ತಾಲೂಕಿನ ಮಾಗನೂರು ಗ್ರಾಮದ ನಾಗೇಂದ್ರ ಸ್ವಾಮಿ(45) ರಾಗಿಬೊಮ್ಮನಹಳ್ಳಿಯ ನಾಗರಾಜ್(50) ಬಂಧಿತರು. ಅಕ್ರಮವಾಗಿ ಮಾರಾಟ ಮಾಡುವ ಉದ್ದೇಶದಿಂದ ನಕ್ಷತ್ರ ಆಮೆ ಸಾಗಿಸಲಾಗುತ್ತಿದೆ ಎನ್ನುವ ಖಚಿತ ಮಾಹಿತಿ ಮೇರೆಗೆ ಪೊಲೀಸರು ಮತ್ತು ಅರಣ್ಯ ಸಂಚಾರಿ ದಳ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದಾರೆ.

ಹುಲುಸುಗುಡ್ಡೆಯ ಸಮೀಪ ಕೊಳ್ಳೇಗಾಲ ಪೊಲೀಸರು ಹಾಗೂ ಅರಣ್ಯ ಸಂಚಾರಿ ದಳ ಕಾರ್ಯಾಚರಣೆ ನಡೆಸಿದ್ದು, ಒಂದು ಕೆಜಿ 280 ಗ್ರಾಂ ತೂಕದ ಎರಡು ಜೀವಂತ ನಕ್ಷತ್ರ ಆಮೆ ಹಾಗೂ ಕಾರ್ ವಶಕ್ಕೆ ಪಡೆದಿದ್ದಾರೆ. ಬಂಧಿತ ಮೂವರು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular