HomeIndiaBREAKING: ನನ್ನ ಧೈರ್ಯ 100 ಪಟ್ಟು ಹೆಚ್ಚಿದೆ: ತಿಹಾರ್ ಜೈಲಿಂದ ಹೊರ ಬಂದ ಅರವಿಂದ್ ಕೇಜ್ರಿವಾಲ್...

BREAKING: ನನ್ನ ಧೈರ್ಯ 100 ಪಟ್ಟು ಹೆಚ್ಚಿದೆ: ತಿಹಾರ್ ಜೈಲಿಂದ ಹೊರ ಬಂದ ಅರವಿಂದ್ ಕೇಜ್ರಿವಾಲ್ ಮೊದಲ ಪ್ರತಿಕ್ರಿಯೆ

ನವದೆಹಲಿ: ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ಗೆ ಸುಪ್ರೀಂ ಕೋರ್ಟ್ ಶುಕ್ರವಾರ ಜಾಮೀನು ನೀಡಿದ್ದು, ಅವರು ತಿಹಾರ್ ಜೈಲಿನಿಂದ ಹೊರ ಬಂದಿದ್ದಾರೆ. ಅವರಿಗೆ ಆಪ್ ಕಾರ್ಯಕರ್ತರು ಅದ್ಧೂರಿ ಸ್ವಾಗತ ನೀಡಿದ್ದಾರೆ.

ತಿಹಾರ್ ಜೈಲಿನಲ್ಲಿರುವಾಗಿನಿಂದ ನನ್ನ ಧೈರ್ಯ 100 ಪಟ್ಟು ಬೆಳೆದಿದೆ ಎಂದು ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.

ತಿಹಾರ್ ಜೈಲಿನಿಂದ ಬಿಡುಗಡೆಯಾದ ನಂತರ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ಇಂದು ನಾನು ಜೈಲಿನಿಂದ ಹೊರಬಂದಿದ್ದೇನೆ. ನನ್ನ ಧೈರ್ಯವು 100 ಪಟ್ಟು ಹೆಚ್ಚಾಗಿದೆ ಎಂದು ಹೇಳಲು ಬಯಸುತ್ತೇನೆ. ಅವರ ಜೈಲಿನ ಗೋಡೆಗಳು ಕೇಜ್ರಿವಾಲ್ ಅವರ ಧೈರ್ಯವನ್ನು ದುರ್ಬಲಗೊಳಿಸಲಾರವು ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನನಗೆ ಸರಿಯಾದ ಮಾರ್ಗವನ್ನು ತೋರಿಸಲು ನಾನು ದೇವರನ್ನು ಪ್ರಾರ್ಥಿಸುತ್ತೇನೆ. ದೇಶವನ್ನು ದುರ್ಬಲಗೊಳಿಸಲು ಮತ್ತು ದೇಶವನ್ನು ವಿಭಜಿಸಲು ಪ್ರಯತ್ನಿಸುತ್ತಿರುವ ಎಲ್ಲಾ ಶಕ್ತಿಗಳ ವಿರುದ್ಧ ನಾನು ಹೋರಾಟವನ್ನು ಮುಂದುವರಿಸುತ್ತೇನೆ ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular