ಬೆಂಗಳೂರು: ರಾಜರಾಜೇಶ್ವರಿ ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಮತ್ತು ಬಿಬಿಎಂಪಿ ಗುತ್ತಿಗೆದಾರ ಚೆಲುವರಾಜು ಅವರದ್ದು ಎನ್ನಲಾದ ಆಡಿಯೋ ವೈರಲ್ ಆಗಿದ್ದು, ಇದರ ಬೆನ್ನಲ್ಲೇ ಶಾಸಕ ಮುನಿರತ್ನ ಅವರ ವಿರುದ್ಧ ಕೊಲೆ ಬೆದರಿಕೆ ಆರೋಪದಡಿ ಗುತ್ತಿಗೆದಾರ ಚೆಲುವರಾಜು ದೂರು ನೀಡಿದ್ದಾರೆ.
ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್ ಅವರಿಗೆ ದೂರು ನೀಡಿರುವ ಚೆಲುವರಾಜು, ಶಾಸಕ ಮುನಿರತ್ನ ವಿರುದ್ಧ ಕೊಲೆ ಬೆದರಿಕೆ, ಜಾತಿ ನಿಂದನೆ ಆರೋಪದಡಿ ದೂರು ದಾಖಲಿಸಿದ್ದು, ಮುನಿರತ್ನ ವಿರುದ್ಧ ಕ್ರಮ ಕೈಗೊಂಡು ತಮಗೆ ರಕ್ಷಣೆ ನೀಡಬೇಕೆಂದು ಮನವಿ ಮಾಡಿದ್ದಾರೆ.
ನನ್ನನ್ನು ಕರೆದು ಬೆದರಿಕೆ ಹಾಕಿದ್ದ ಮನ್ನಿರತ್ನ 20 ಲಕ್ಷ ರೂಪಾಯಿ ಹಣ ಕೇಳಿದ್ದರು. ರೇಣುಕಾಸ್ವಾಮಿಗೆ ಆದ ಗತಿ ನಿನಗೆ ನಿನಗೂ ಆಗುತ್ತೆ ನೋಡು, ನನ್ನ ಅಕ್ಕನ ಮಗ ರೇಣುಕಾಸ್ವಾಮಿಗೆ ಗತಿ ಕಾಣಿಸಿದ್ದು ಎಂದು ಆವಾಜ್ ಹಾಕಿದ್ದಾರೆ. ನಾನು ಆತ್ಮಹತ್ಯೆಗೆ ಯತ್ನಿಸಿದ್ದು, ಕುಟುಂಬದವರಿಗೂ ಕೊಂಡಿದ್ದೇನೆ ಎಂದು ಚೆಲುವರಾಜು ದೂರು ನೀಡಿದ್ದಾರೆ.