HomeKarnataka126 ಅಂಗನವಾಡಿ ಕಾರ್ಯಕರ್ತೆಯರು, 448 ಸಹಾಯಕಿಯರ ಹುದ್ದೆಗೆ ಅರ್ಜಿ: ಕೆಲಸ ಕೊಡಿಸುವುದಾಗಿ ಮಧ್ಯವರ್ತಿಗಳಿಂದ ಹಣ ವಸೂಲಿ:...

126 ಅಂಗನವಾಡಿ ಕಾರ್ಯಕರ್ತೆಯರು, 448 ಸಹಾಯಕಿಯರ ಹುದ್ದೆಗೆ ಅರ್ಜಿ: ಕೆಲಸ ಕೊಡಿಸುವುದಾಗಿ ಮಧ್ಯವರ್ತಿಗಳಿಂದ ಹಣ ವಸೂಲಿ: ಮೋಸ ಹೋಗದಂತೆ ಎಚ್ಚರಿಕೆ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವ್ಯಾಪ್ತಿಗೆ ಬರುವ 7 ತಾಲೂಕುಗಳಲ್ಲಿ ಖಾಲಿಯಿರುವ 126 ಅಂಗನವಾಡಿ ಕಾರ್ಯಕರ್ತೆ ಮತ್ತು 448 ಸಹಾಯಕಿಯರ ಹುದ್ದೆಗಳಿಗೆ ಸ್ಥಳೀಯ ಕಂದಾಯ ಗ್ರಾಮ/ವಾರ್ಡ್ ಗಳ ಕಾರ್ಯಕರ್ತೆಯರ ಹುದ್ದೆಗೆ ಪಿಯುಸಿ ಪಾಸಾದ ಹಾಗೂ ಸಹಾಯಕಿ ಹುದ್ದೆಗೆ ಎಸ್.ಎಸ್.ಎಲ್.ಸಿ. ಪಾಸಾದ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ.

ಈ ಆಯ್ಕೆಯನ್ನು ಪಾರದರ್ಶಕವಾಗಿ ಮಾಡುವ ಸಲುವಾಗಿ ತಾಲೂಕು ಮಟ್ಟದಲ್ಲಿ ತಹಶೀಲ್ದಾರ್ ಅಧ್ಯಕ್ಷತೆಯಲ್ಲಿ ಹಾಗೂ ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಆಯ್ಕೆ ಸಮಿತಿಯನ್ನು ರಚಿಸಲಾಗಿದ್ದು, ಈ ಆಯ್ಕೆಯನ್ನು ಅರ್ಹ ಅಭ್ಯರ್ಥಿಗಳು ಗಳಿಸಿರುವ ಅಂಕಗಳ ಆಧಾರದ ಮೇಲೆ ಪಾರದರ್ಶಕವಾಗಿ ಆಯ್ಕೆ ಮಾಡಲಾಗುವುದು.

ಕೆಲವು ಮಧ್ಯವರ್ತಿಗಳು ಕೆಲಸ ಕೊಡಿಸುವುದಾಗಿ ನಂಬಿಸಿ ಹಣ ಪಡೆಯುತ್ತಿರುವ ಬಗ್ಗೆ ದೂರುಗಳು ಸ್ವೀಕೃತವಾಗಿದ್ದು, ಯಾರೂ ಸಹ ಹಣ ನೀಡಿ ಮೋಸ ಹೋಗಬಾರದಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular