alex Certify ಹಾಸನದ ಸಂಸದರ ಕ್ವಾರ್ಟರ್ಸ್ ನಲ್ಲೇ ಜಿಪಂ ಮಾಜಿ ಸದಸ್ಯೆ ಮೇಲೆ ಅತ್ಯಾಚಾರ: ವಿಡಿಯೋ ಮಾಡಿಕೊಂಡಿದ್ದ ಪ್ರಜ್ವಲ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹಾಸನದ ಸಂಸದರ ಕ್ವಾರ್ಟರ್ಸ್ ನಲ್ಲೇ ಜಿಪಂ ಮಾಜಿ ಸದಸ್ಯೆ ಮೇಲೆ ಅತ್ಯಾಚಾರ: ವಿಡಿಯೋ ಮಾಡಿಕೊಂಡಿದ್ದ ಪ್ರಜ್ವಲ್

ಬೆಂಗಳೂರು: ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಹಾಸನದ ಸಂಸದರ ಕ್ವಾರ್ಟರ್ಸ್ ನಲ್ಲಿಯೇ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆಗೆ ಬೆದರಿಕೆ ಹಾಕಿ ಅತ್ಯಾಚಾರ ಎಸಗಿದ್ದರು ಎನ್ನುವುದು ತನಿಖೆಯಲ್ಲಿ ದೃಢಪಟ್ಟಿದೆ ಎಂದು ಸಿಐಡಿ ಎಸ್ಐಟಿ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದೆ.

40 ವರ್ಷದ ಸಂತ್ರಸ್ತೆ ಮೇಲೆ ಅತ್ಯಾಚಾರ ಎಸಗಿ ಕೃತ್ಯವನ್ನು ಮೊಬೈಲ್ ನಲ್ಲಿ ವಿಡಿಯೋ ಮಾಡಿಟ್ಟುಕೊಂಡಿದ್ದ ಬಗ್ಗೆ ಶುಕ್ರವಾರ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ 1,691 ಪುಟಗಳ ಚಾರ್ಜ್ ಶೀಟ್ ಸಲ್ಲಿಸಲಾಗಿದೆ. ಸಂತ್ರಸ್ತೆ ಮೇಲೆ ಬಲವಂತದಿಂದ ಅತ್ಯಾಚಾರ ಎಸಗಿರುವುದು ದೃಢಪಟ್ಟಿದೆ. ಎಂದು ಸಾಕ್ಷ್ಯಾಧಾರಗಳನ್ನು ಲಗತ್ತಿಸಲಾಗಿದೆ. ಸಂತ್ರಸ್ತೆಯ ಹೇಳಿಕೆ, 120 ಸಾಕ್ಷಿದಾರರ ಹೇಳಿಕೆಗಳು, ಡಿಜಿಟಲ್ ಸಾಕ್ಷ್ಯಾಧಾರಗಳನ್ನು ಲಗತ್ತಿಸಲಾಗಿದೆ.

ಈ ಮೂಲಕ ಪ್ರಜ್ವಲ್ ರೇವಣ್ಣ ವಿರುದ್ಧ ಮೂರನೇ ಚಾರ್ಜ್ ಶೀಟ್ ಸಲ್ಲಿಕೆಯಾಗಿದ್ದು, ಮತ್ತೊಂದು ಪ್ರಕರಣದ ತನಿಖೆ ಅಂತಿಮ ಹಂತದಲ್ಲಿದೆ. ಶೀಘ್ರವೇ ಆ ಪ್ರಕರಣದ ಚಾರ್ಜ್ ಶೀಟ್ ಸಲ್ಲಿಸಲು ಸಿದ್ಧತೆ ನಡೆಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...