ಚಿಕ್ಕಬಳ್ಳಾಪುರ : ಒಂದೇ ಹಗ್ಗಕ್ಕೆ ಕೊರಳೊಡ್ಡಿ ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಶಿಡ್ಲಘಟ್ಟದಲ್ಲಿ ನಡೆದಿದೆ.
ನವೀನ್ ಹಾಗೂ ವಂದನಾ ಎಂಬುವವರು ಮಾವಿನ ತೋಪಿನಲ್ಲಿ ನೇಣಿಗೆ ಕೊರಳೊಡ್ಡಿದ್ದಾರೆ. ಮೃತರು ಚಿಂತಾಮಣಿ ನಿವಾಸಿಗಳು ಎಂದು ತಿಳಿದು ಬಂದಿದೆ.
ವಂದನಾ ಎಸ್ ಎಸ್ ಎಲ್ ಸಿ ಓದುತ್ತಿದ್ದು, ವಂದನಾಗೆ ನವೀನ್ ಜೊತೆ ಪ್ರೇಮಾಂಕುರವಾಗಿತ್ತು. ಆದರೆ ಇಬ್ಬರ ಪ್ರೀತಿಗೆ ಪೋಷಕರು ವಿರೋಧ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆ ಇಬ್ಬರು ಒಂದೇ ಹಗ್ಗಕ್ಕೆ ಕೊರಳೊಡ್ಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.