ದಾವಣಗೆರೆ : ದಾವಣಗೆರೆ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಚನ್ನಗಿರಿ ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ 16 ಅಂಗನವಾಡಿ ಕಾರ್ಯಕರ್ತೆ ಹಾಗೂ 52 ಅಂಗನವಾಡಿ ಸಹಾಯಕಿಯರ ಗೌರವ ಸೇವೆಯ ಹುದ್ದೆಗೆ ಮಹಿಳಾ ಹಾಗೂ ಲಿಂಗತ್ವ ಅಲ್ಪಸಂಖ್ಯಾತ ಆಭ್ಯರ್ಥಿಗಳಿಂದ ಈಗಾಗಲೇ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವ ಅವಧಿಯನ್ನು ಅಕ್ಟೋಬರ್ 9 ವರೆಗೆ ವಿಸ್ತರಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿರ್ದೇಶಕ ರಾಜಾನಾಯ್ಕ ತಿಳಿಸಿದ್ದಾರೆ.
ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ನೇಮಕಾತಿ ಅವಧಿ ವಿಸ್ತರಣೆ
14-09-2024 10:41AM IST / No Comments / Posted In: Latest News