HomeKarnatakaಮೀಸಲಾತಿ ಕುರಿತು ರಾಹುಲ್ ಗಾಂಧಿ ಹೇಳಿಕೆಗೆ ಖಂಡನೆ: ಬಿಜೆಪಿ ಪ್ರತಿಭಟನೆ; ಫ್ರೀಡಂ ಪಾರ್ಕ್ ನಲ್ಲಿ ಹೈಡ್ರಾಮಾ

ಮೀಸಲಾತಿ ಕುರಿತು ರಾಹುಲ್ ಗಾಂಧಿ ಹೇಳಿಕೆಗೆ ಖಂಡನೆ: ಬಿಜೆಪಿ ಪ್ರತಿಭಟನೆ; ಫ್ರೀಡಂ ಪಾರ್ಕ್ ನಲ್ಲಿ ಹೈಡ್ರಾಮಾ

ಬೆಂಗಳೂರು: ಮೀಸಲಾತಿ ಕುರಿತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೀಡಿರುವ ಹೇಳಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ ನಡೆಸಿದ್ದು, ಈ ವೇಳೆ ಹೈಡ್ರಾಮಾ ನಡೆದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಬಿಜೆಪಿ ಎಸ್ ಸಿ ಎಸ್ ಟಿ ಮೋರ್ಚಾ ವತಿಯಿಂದ ಪ್ರತಿಭಟನೆ ಹಮ್ಮಿಕೊಂಡಿದ್ದು, ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಎಸ್. ಸಿ. ಮೋರ್ಚಾ ರಾಜ್ಯ ಅಧ್ಯಕ್ಷ ಸಿಮೆಂಟ್ ಮಂಜುನಾಥ್, ಎಸ್.ಟಿ. ಮೋರ್ಚಾ ರಾಜ್ಯ ಅಧ್ಯಕ್ಷ ಬಂಗಾರು ಹನುಮಂತು ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.

ವಿದೇಶದಲ್ಲಿ ರಾಹುಲ್‌ ಗಾಂಧಿ ಎಸ್‌ಸಿ, ಎಸ್‌ಟಿ ಮೀಸಲಾತಿಯನ್ನು ತೆಗೆಯುವ ಹೇಳಿಕೆ ನೀಡಿದ್ದಕ್ಕೆ ಪ್ರತಿಭಟನಾಕಾರರು ರಾಹುಲ್ ಗಾಂಧಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ರಾಹುಲ್ ಗಾಂಧಿ ಪ್ರತಿಕೃತಿ ದಹಿಸಲು ಪ್ರತಿಭಟನಾಕಾರರು ಮುಂದಾಗಿದ್ದ ವೇಳೆ ಪೊಲೀಸರು ಪ್ರತಿಕೃತಿ ದಹಿಸದಂತೆ ತಡೆದಿದ್ದಾರೆ. ಈ ವೇಳೆ ಪೊಲೀಸರು ಹಾಗೂ ಪ್ರತಿಭಟನಾಕರರ ನಡುವೆ ರಾಹುಲ್ ಪ್ರತಿಕೃತಿ ಎಳೆದಾಟವೂ ನಡೆದಿದ್ದು, ಹೈಡ್ರಾಮಾ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular