HomeKarnatakaವಾಲ್ಮೀಕಿ ನಿಗಮದ ಬ್ರಹ್ಮಾಂಡ ಭ್ರಷ್ಟಾಚಾರ ಬಗೆದಷ್ಟು ಬಯಲು; ಗಂಗಾ ಕಲ್ಯಾಣ ಯೋಜನೆ ಹಣ ಲೂಟಿ ಇಡಿ...

ವಾಲ್ಮೀಕಿ ನಿಗಮದ ಬ್ರಹ್ಮಾಂಡ ಭ್ರಷ್ಟಾಚಾರ ಬಗೆದಷ್ಟು ಬಯಲು; ಗಂಗಾ ಕಲ್ಯಾಣ ಯೋಜನೆ ಹಣ ಲೂಟಿ ಇಡಿ ಚಾರ್ಜ್ ಶೀಟ್ ನಲ್ಲಿ ಬಹಿರಂಗ: ಬಿಜೆಪಿ ಕಿಡಿ

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಬ್ರಹ್ಮಾಂಡ ಭ್ರಷ್ಟಾಚಾರ ಬಗೆದಷ್ಟು ಬಯಲಾಗುತ್ತಿದೆ. ಪರಿಶಿಷ್ಟರ ಕಲ್ಯಾಣದ ನೆಪದಲ್ಲಿ ಕಾಂಗ್ರೆಸ್ ಸರ್ಕಾರ, ಗಂಗಾ ಕಲ್ಯಾಣ ಯೋಜನೆಯ ಹಣವನ್ನು ಲಪಟಾಯಿಸಿರುವುದು ಇ.ಡಿ. ದೋಷಾರೋಪ ಪಟ್ಟಿಯಲ್ಲಿ ಬಯಲಾಗಿದೆ ಎಂದು ಬಿಜೆಪಿ ಕಿಡಿಕಾರಿದೆ.

2023-24ನೇ ಸಾಲಿನ ಗಂಗಾ ಕಲ್ಯಾಣ ಯೋಜನೆಯ ಫಲಾನುಭವಿಗಳಿಗೆ ಮಂಜೂರಾಗಿದ್ದ 44 ಕೋಟಿ ರೂ ಅನುದಾನವೂ ಫಲಾನುಭವಿಗಳಿಗೆ ತಲುಪಿಲ್ಲ ಎಂದು ಆರೋಪಿಸಿದೆ.

ಸಮಾಜವಾದಿ ಹಿನ್ನೆಲೆಯ ಹಣೆ ಪಟ್ಟಿ ಕಟ್ಟಿಕೊಂಡಿರುವ ಸಿಎಂ ಸಿದ್ದರಾಮಯ್ಯನವರೇ, ಯಾವ ಮುಖವಿಟ್ಟುಕೊಂಡು ಸಿಎಂ ಸ್ಥಾನದಲ್ಲಿ ಮುಂದುವರಿಯುತ್ತೀರಿ, ಕಿಂಚಿತ್ತಾದರೂ ನೈತಿಕತೆಯಿದ್ದರೇ ಮೊದಲು ರಾಜೀನಾಮೆ ಕೊಟ್ಟು ಹೊರಡಿ ಎಂದು ಆಗ್ರಹಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular