ಬೆಂಗಳೂರು: ಜೀವ ಬೆದರಿಕೆ, ಜಾತಿ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ರಾಜರಾಜೇಶ್ವರಿ ನಗರ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಎರಡು ದಿನ ಪೊಲೀಸ್ ಕಸ್ಟಡಿಗೆ ನೀಡಿ ಆದೇಶಿಸಲಾಗಿದೆ.
ಜೀವ ಬೆದರಿಕೆ, ಜಾತಿ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಮುನಿರತ್ನ ಅವರ ಆರೋಗ್ಯ ತಪಾಸಣೆ ನಡೆಸಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿದೆ.
ವಿಚಾರಣೆಗಾಗಿ ಮುನಿರತ್ನ ಅವರನ್ನು ಒಂದು ವಾರ ಕಾಲ ಕಸ್ಟಡಿಗೆ ನೀಡುವಂತೆ ಪೊಲೀಸರು ಮನವಿ ಮಾಡಿದ್ದಾರೆ. ವಿಚಾರಣೆ ನಡೆಸಿ ಎರಡು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಆದೇಶಿಸಿದ್ದಾರೆ.