HomeAutoಹಳೆ ವಾಹನಗಳಿಗೆ HSRP ಅಳವಡಿಕೆ ಗಡುವು ಡಿಸೆಂಬರ್ ವರೆಗೆ ವಿಸ್ತರಣೆ ಸಾಧ್ಯತೆ

ಹಳೆ ವಾಹನಗಳಿಗೆ HSRP ಅಳವಡಿಕೆ ಗಡುವು ಡಿಸೆಂಬರ್ ವರೆಗೆ ವಿಸ್ತರಣೆ ಸಾಧ್ಯತೆ

ಬೆಂಗಳೂರು: ಹಳೆ ವಾಹನಗಳಿಗೆ HSRP ನಂಬರ್ ಪ್ಲೇಟ್ ಅಳವಡಿಸಲು ನೀಡಲಾಗಿದ್ದ ಗಡುವು ಸೆ. 15ಕ್ಕೆ ಮುಕ್ತಾಯವಾಗಿದ್ದು, HSRP ಅಳವಡಿಸಿದ ವಾಹನಗಳಿಗೆ ದಂಡ ವಿಧಿಸುವ ನಿರ್ಧಾರವನ್ನು ಸದ್ಯಕ್ಕೆ ಸಾರಿಗೆ ಇಲಾಖೆ ಕೈಗೊಂಡಿಲ್ಲ. ನಂಬರ್ ಪ್ಲೇಟ್ ಅಳವಡಿಸಲು ಡಿಸೆಂಬರ್ ವರೆಗೆ ಗಡುವು ವಿಸ್ತರಿಸುವ ಸಾಧ್ಯತೆ ಇದೆ.

HSRP  ಅಳವಡಿಸಿದ ವಾಹನಗಳಿಗೆ ಸೆ. 16ರಿಂದ ದಂಡ ವಿಧಿಸಲಾಗುವುದು ಎಂದು ಹೇಳಲಾಗಿತ್ತು. ಆದರೆ, ಈ ಸಂಬಂಧ ಸಲ್ಲಿಕೆಯಾದ ಅರ್ಜಿ ವಿಚಾರಣೆ ಸೆ. 18ರಂದು ಹೈಕೋರ್ಟ್ ನಲ್ಲಿ ನಡೆಯಲಿದೆ. ಹೀಗಾಗಿ ಸದ್ಯಕ್ಕೆ ಸಾರಿಗೆ ಇಲಾಖೆ ಅಧಿಕಾರಿಗಳು ದಂಡ ವಿಧಿಸುವ ಬಗ್ಗೆ ತೀರ್ಮಾನಿಸಿಲ್ಲ.

ವಿಚಾರಣೆಯ ನಂತರ ದಂಡ ವಿಧಿಸಬೇಕೆ ಅಥವಾ ಗಡುವು ವಿಸ್ತರಿಸಬೇಕೆ ಎನ್ನುವ ನಿರ್ಧಾರ ಕೈಗೊಳ್ಳಲಿದ್ದು, ಬಹುತೇಕ ಡಿಸೆಂಬರ್ ವರೆಗೂ ಗಡುವು ವಿಸ್ತರಿಸುವ ಸಾಧ್ಯತೆ ಇದೆ. ಇಲ್ಲದಿದ್ದಲ್ಲಿ ಹೈಕೋರ್ಟ್ ವಿಚಾರಣೆ ನಂತರ ದಂಡ ವಿಧಿಸುವ ಬಗ್ಗೆ ತೀರ್ಮಾನಿಸಲಾಗುವುದು ಎಂದು ಹೇಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

2019ರ ಏಪ್ರಿಲ್ 1ಕ್ಕಿಂತ ಮೊದಲು ನೋಂದಣಿಯಾದ ಹಳೆಯ ವಾಹನಗಳಿಗೆ HSRP ಅಳವಡಿಕೆ ಕಡ್ಡಾಯವಾಗಿದೆ. ರಾಜ್ಯದಲ್ಲಿ ಇನ್ನೂ ಸುಮಾರು 1 ಕೋಟಿ ವಾಹನಗಳಿಗೆ HSRP ಅಳವಡಿಸಿಕೊಳ್ಳಬೇಕಿರುವುದರಿಂದ ಗಡುವು ವಿಸ್ತರಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular