alex Certify ವೇಗವಾಗಿ ಬಂದ ಟ್ರಕ್ ವ್ಯಾನ್ ಗೆ ಡಿಕ್ಕಿ: ಅಪಘಾತದಲ್ಲಿ ಆರು ಯಾತ್ರಿಕರು ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವೇಗವಾಗಿ ಬಂದ ಟ್ರಕ್ ವ್ಯಾನ್ ಗೆ ಡಿಕ್ಕಿ: ಅಪಘಾತದಲ್ಲಿ ಆರು ಯಾತ್ರಿಕರು ಸಾವು

ಕೋಟಾ: ರಾಜಸ್ಥಾನದ ಬುಂದಿ ಜಿಲ್ಲೆಯಲ್ಲಿ ವೇಗವಾಗಿ ಬಂದ ಟ್ರಕ್ ವ್ಯಾನ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆರು ಯಾತ್ರಾರ್ಥಿಗಳು ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿರುವ ಘಟನೆ ಭಾನುವಾರ ಮುಂಜಾನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಧ್ಯಪ್ರದೇಶದ ದೇವಾಸ್ ಜಿಲ್ಲೆಯ ಒಂಬತ್ತು ಯಾತ್ರಾರ್ಥಿಗಳು ಸಿಕರ್ ಜಿಲ್ಲೆಯ ಖತು ಶ್ಯಾಮ್ ದೇವಸ್ಥಾನಕ್ಕೆ ತೆರಳುತ್ತಿದ್ದಾಗ ಮುಂಜಾನೆ 5 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ. ಮೃತರು 16-40 ವರ್ಷ ವಯೋಮಾನದವರಾಗಿದ್ದು, ಮದನ್ ನಾಯಕ್, ಮಂಗಿಲಾಲ್ ನಾಯಕ್, ಮಹೇಶ್ ನಾಯಕ್, ರಾಜೇಶ್ ಮತ್ತು ಪುನಂ ಎಂದು ಗುರುತಿಸಲಾಗಿದೆ.

ಮೃತರಲ್ಲಿ ಒಬ್ಬರ ಗುರುತು ಇನ್ನೂ ಪತ್ತೆಯಾಗಿಲ್ಲ. ಟ್ರಕ್ ರಸ್ತೆಯ ಡಿವೈಡರ್ ದಾಟಿ ತಪ್ಪು ಬದಿಗೆ ತಿರುಗಿ ವ್ಯಾನ್‌ಗೆ ಡಿಕ್ಕಿ ಹೊಡೆದಿದೆ ಎಂದು ಹಿಂದೋಳಿ ಪೊಲೀಸ್ ಠಾಣೆಯ ಸರ್ಕಲ್ ಇನ್ಸ್‌ ಪೆಕ್ಟರ್ ಪವನ್ ಮೀನಾ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...