HomeKarnatakaಶಾಮನೂರು ಶಿವಶಂಕರಪ್ಪ ಹ್ಯಾಟ್ರಿಕ್: ಸತತ 3ನೇ ಬಾರಿಗೆ ವೀರಶೈವ ಮಹಾಸಭಾ ಅಧ್ಯಕ್ಷರಾಗಿ ಆಯ್ಕೆ

ಶಾಮನೂರು ಶಿವಶಂಕರಪ್ಪ ಹ್ಯಾಟ್ರಿಕ್: ಸತತ 3ನೇ ಬಾರಿಗೆ ವೀರಶೈವ ಮಹಾಸಭಾ ಅಧ್ಯಕ್ಷರಾಗಿ ಆಯ್ಕೆ

ಬೆಂಗಳೂರು: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಅಧ್ಯಕ್ಷರಾಗಿ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಮೂಲಕ ಅವರು ಹ್ಯಾಟ್ರಿಕ್ ಗೆಲುವು ಸಾಧಿಸಿದ್ದಾರೆ.

ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಅವರ ಹೊರತಾಗಿ ಯಾರೂ ನಾಮಪತ್ರ ಸಲ್ಲಿಸದ ಕಾರಣ ಕಣದಲ್ಲಿ ಉಳಿದಿದ್ದ ಶಾಮನೂರು ಶಿವಶಂಕರಪ್ಪ ಅವಿರೋಧವಾಗಿ ಪುನರಾಯ್ಕೆಯಾಗಿದ್ದಾರೆ ಎಂದು ಚುನಾವಣಾ ಅಧಿಕಾರಿ ಎಂ.ಬಿ. ದ್ಯಾಬೇರಿ ಘೋಷಿಸಿದ್ದಾರೆ.

ಸತತ ಮೂರನೇ ಬಾರಿಗೆ ಗೆಲುವು ಸಾಧಿಸಿದ ಶಾಮನೂರು ಶಿವಶಂಕರಪ್ಪ ಅಖಿಲ ಭಾರತ ವೀರಶೈವ ಮಹಾಸಭಾ ಆಡಳಿತ ಚುಕ್ಕಾಣಿ ಹಿಡಿದಿದ್ದಾರೆ. ಇತ್ತೀಚೆಗೆ ಮಹಾಸಭಾ ರಾಜ್ಯಾಧ್ಯಕ್ಷರಾಗಿ ಶಂಕರ್ ಬಿದರಿ ಆಯ್ಕೆಯಾಗಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular