HomeKarnatakaBREAKING : ಮಂಗಳೂರಿನಲ್ಲಿ 'ಹಿಂದೂ' ಕಾರ್ಯಕರ್ತರಿಂದ ಭಾರಿ ಪ್ರತಿಭಟನೆ : ಹಲವರು ಪೊಲೀಸ್ ವಶಕ್ಕೆ.!

BREAKING : ಮಂಗಳೂರಿನಲ್ಲಿ ‘ಹಿಂದೂ’ ಕಾರ್ಯಕರ್ತರಿಂದ ಭಾರಿ ಪ್ರತಿಭಟನೆ : ಹಲವರು ಪೊಲೀಸ್ ವಶಕ್ಕೆ.!

ಮಂಗಳೂರು : ಮಂಗಳೂರಿನಲ್ಲಿ ಹಿಂದೂಪರ ಸಂಘಟನೆಗಳು ಭಾರಿ ಸಂಖ್ಯೆಯಲ್ಲಿ ಜಮಾಯಿಸಿ ಪ್ರತಿಭಟನೆ ನಡೆಸುತ್ತಿದ್ದು, ಹಲವು ಹಿಂದೂ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿಸಿ ರೋಡ್ನಲ್ಲಿ  ಬಿಸಿ ರೋಡ್ ಚಲೋ ಹಮ್ಮಿಕೊಂಡಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಜಮಾಯಿಸಿದ್ದು, ಪಂಪ್’ವೆಲ್ ರನ್ನು ಎತ್ತಿ ಹಿಂದೂಪರ ಸಂಘಟನೆ ಕಾರ್ಯಕರ್ತರು ಘೋಷಣೆಗಳನ್ನು ಕೂಡ ಕೂಗಿದ್ದಾರೆ.

ಮಂಗಳೂರಿನ ಬಿಸಿ ರೋಡ್ ನಲ್ಲಿ ಹಿಂದೂ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದು, ಈದ್ ಮಿಲಾದ್ ಮೆರವಣಿಗೆ ತಡೆಯುವ ಯತ್ನ ನಡೆಯುತ್ತಿದೆ ಎನ್ನಲಾಗಿದೆ. ಈ ಹಿನ್ನೆಲೆ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸ್ ಸರ್ಪಗಾವಲು ಹಾಲಾಗಿದ್ದು, ಬಿಗಿ ಬಂದೋಬಸ್ತ್ ಮಾಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಏನಿದು ವಿವಾದ

ನಾಗಮಂಗಲ ಗಣೇಶ ಮೆರವಣಿಗೆ ಕಲ್ಲು ತೂರಾಟ ಪ್ರಕರಣಕ್ಕೆ ಶರಣ್ ಪಂಪ್ವೆಲ್ ಆಕ್ರೋಶ ಹೊರಹಾಕಿದ್ದರು. ಈದ್ ಮಿಲಾದ್ ಮೆರವಣಿಗೆ ಹೇಗೆ ಮಾಡ್ತೀರಿ ನೋಡೋಣ ಎಂದು ಸವಾಲು ಹಾಕಿದ್ದರು. ಇದಕ್ಕೆ ಬಂಟ್ವಾಳ ಪುರಸಭಾ ಮಾಜಿ ಅಧ್ಯಕ್ಷ ಮಹಮ್ಮದ್ ಷರೀಫ್ ಓಪನ್ ಚಾಲೆಂಜ್ ಹಾಕಿದ್ದು, ಧಮ್ ಇದ್ದರೆ ಮಿಲಾದ್ ಮೆರವಣಿಗೆ ತಡಿ ಎಂದು ಸವಾಲ್ ಹಾಕಿದ್ದರು.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular