HomeKarnatakaBIG NEWS : ತೀವ್ರಗೊಂಡ ಬಿಜೆಪಿ ಶಾಸಕ 'ಮುನಿರತ್ನ' ವಿಚಾರಣೆ : ಧ್ವನಿ ಸ್ಯಾಂಪಲ್ಸ್ 'FSL'...

BIG NEWS : ತೀವ್ರಗೊಂಡ ಬಿಜೆಪಿ ಶಾಸಕ ‘ಮುನಿರತ್ನ’ ವಿಚಾರಣೆ : ಧ್ವನಿ ಸ್ಯಾಂಪಲ್ಸ್ ‘FSL’ ಗೆ ರವಾನೆ..!

ಬೆಂಗಳೂರು : ಜೀವ ಬೆದರಿಕೆ ಹಾಗೂ ಜಾತಿ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಪೊಲಿಸರು ವಶಕ್ಕೆ ಪಡೆದಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಮುನಿರತ್ನ ವಿಚಾರಣೆ ತೀವ್ರಗೊಂಡಿದ್ದು, ಪೊಲೀಸರು ಧ್ವನಿ ಸ್ಯಾಂಪಲ್ಸ್’ನ್ನು ಎಫ್ ಎಸ್ ಎಲ್ ಗೆ ರವಾನೆ ಮಾಡಿದ್ದಾರೆ. ವೈರಲ್ ಆದ ಆಡಿಯೋ ಮುನಿರತ್ನ ಅವರದ್ದೇ ಎಂದು ಧೃಡಪಡಿಸಲು ಧ್ವನಿ ಸ್ಯಾಂಪಲ್ಸ್ ನ್ನು ಎಫ್ ಎಸ್ ಎಲ್ ಗೆ ಕಳುಹಿಸಿದ್ದಾರೆ.

ಗುತ್ತಿಗೆದಾರ ಚಲುವರಾಜುಗೆ ಜೀವ ಬೆದರಿಕೆ, ಅವಾಚ್ಯ ಪದಗಳಿಂದ ನಿಂದನೆ ಹಾಗೂ ಮಾಜಿ ಕಾರ್ಪೊರೇಟರ್ ವಿರುದ್ಧ ಜಾತಿ ನಿಂದನೆ ಪ್ರಕರಣ ಸಂಬಂಧ ಬೆಂಗಳೂರಿನ ವಯ್ಯಾಲಿಕಾವಲ್ ಪೊಲೀಸ್ ಠಾಣೆಯಲ್ಲಿ ಮುನಿರತ್ನ ವಿರುದ್ಧ ಎರಡು ಎಫ್ ಐಆರ್ ದಾಖಲಾಗಿತ್ತು. ಗುತ್ತಿಗೆದಾರನ ಜೊತೆ ಮಾತನಾಡಿದ್ದಾರೆ ಎನ್ನಲಾದ ಮುನಿರತ್ನ ಆಡಿಯೋ ಕೂಡ ವೈರಲ್ ಆಗಿತ್ತು. ಈ ಪ್ರಕರಣ ಸಂಬಂಧ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular