HomeKarnatakaBREAKING : ನಾಗಮಂಗಲ ಗಲಭೆ ವೇಳೆ ಪಾಕ್ ಪರ ಘೋಷಣೆ..? : ಆರ್.ಅಶೋಕ್

BREAKING : ನಾಗಮಂಗಲ ಗಲಭೆ ವೇಳೆ ಪಾಕ್ ಪರ ಘೋಷಣೆ..? : ಆರ್.ಅಶೋಕ್

ಬೆಂಗಳೂರು : ನಾಗಮಂಗಲ ಗಲಭೆ ವೇಳೆ ಕಿಡಿಗೇಡಿಗಳು ಪಾಕಿಸ್ತಾನ ಪರ ಘೋಷಣೆ ಕೂಗಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ವಿಪಕ್ಷ ನಾಯಕ ಆರ್ ಅಶೋಕ್ ಪೋಸ್ಟ್ ಹಂಚಿಕೊಂಡಿದ್ದಾರೆ.

ನಾಗಮಂಗಲ ಕೋಮುಗಲಭೆ ವೇಳೆ ಪಾಕ್ ಪರ ಘೋಷಣೆ? ನಾಗಮಂಗಲದಲ್ಲಿ ಬುಧವಾರ ರಾತ್ರಿ ಗಣೇಶ ವಿಸರ್ಜನೆ ವೇಳೆ ನಡೆದ ಕೋಮುಗಲಭೆಯಲ್ಲಿ ಮೂವರು ಕಿಡಿಗೇಡಿಗಳು ಪಾಕಿಸ್ತಾನ ಜಿಂದಾಬಾದ್ ಘೋಷಣೆಗಳು ಕೂಗಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳ ಹೇಳುತ್ತಿದ್ದು, ಈ ಕೋಮುದಳ್ಳುರಿಯಲ್ಲಿ ನಿಷೇಧಿತ ಸಂಘಟನೆಗಳ ಕೈವಾಡವಿರುವ ಅನುಮಾನ ಮತ್ತಷ್ಟು ಗಟ್ಟಿಯಾಗಿತ್ತಿದೆ.

ಇದರ ಬೆನ್ನಲ್ಲೇ ಚಿಕ್ಕಮಗಳೂರಲ್ಲಿ ಬೈಕ್ ನಲ್ಲಿ ಪ್ಯಾಲೆಸ್ತೀನ್ ಧ್ವಜ ಹಿಡಿದಿರುವ ಪುಂಡಾಟ, ದಾವಣಗೆರೆಯ ಗಾಂಧಿನಗರ ಹಾಗೂ ಅಹ್ಮದ್ ನಗರಗಳಲ್ಲಿ ಹಿಂದೂ ಯುವಕರು ಬಾವುಟ ಕಟ್ಟಿದ್ದಕ್ಕೆ ಮತಾಂಧ ಪುಂಡರು ಅವರ ಮೇಲೆ ಹಲ್ಲೆ ಮಾಡಿರುವುದು, ಇವನ್ನೆಲ್ಲಾ ಗಮನಿಸುತ್ತಿದ್ದರೆ ಈ ಪ್ರಚೋದನಕಾರಿ ಘಟನೆಗಳು ಗಣೇಶೋತ್ಸವವನ್ನೇ ಟಾರ್ಗೆಟ್ ಮಾಡಿರುವಂತಿದೆ. ಇಂತಹ ಘಟನೆಗಳು ಅಯೋಧ್ಯ ರಾಮ ಮಂದಿರದ ಉದ್ಘಾಟನೆ ಸಂದರ್ಭದಲ್ಲಿಯೂ ನಡೆದಿತ್ತು. ಹಿಂದೂಗಳ ಹಬ್ಬಗಳು, ಉತ್ಸವಗಳು, ಸಂಭ್ರಮಾಚರಣೆಗಳನ್ನೇ ಗುರಿಯಾಗಿಸಿ ರಾಜ್ಯಾದ್ಯಂತ ನಡೆಸುತ್ತಿರುವ ಇಂತಹ ದುಷ್ಕೃತ್ಯಗಳ ಹಿಂದೆ ಮತೀಯ ಮೂಲಭೂತವಾದಿ ಸಂಘಟನೆಗಳ ದೊಡ್ಡ ಜಾಲವೇ ಇರುವಂತಿದೆ. ಅಂತಾರಾಜ್ಯ, ಅಂತರಾಷ್ಟ್ರೀಯ ನಂಟು ಹೊಂದಿರುವ ಇಂತಹ ವ್ಯವಸ್ಥಿತ, ಪ್ರಾಯೋಜಿತ, ಜಾಲವನ್ನ ಬೇಧಿಸುವುದು ಸ್ಥಳೀಯ ಪೊಲೀಸರಿಂದ ಅಸಾಧ್ಯವಾಗಿದ್ದು, ಕೂಡಲೇ ಈ ಪ್ರಕರಣಗಳನ್ನ NIA ತನಿಖೆಗೆ ಒಪ್ಪಿಸಬೇಕು ಎಂದು ಗೃಹ ಸಚಿವ ಪರಮೇಶ್ವರ್ ಅವರನ್ನ ಒತ್ತಾಯಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular