HomeIndiaSHOCKING : ದೇಶದಲ್ಲಿ ಮತ್ತೊಂದು 'ಪೈಶಾಚಿಕ ಕೃತ್ಯ' : 5ನೇ ತರಗತಿ ವಿದ್ಯಾರ್ಥಿನಿ ಮೇಲೆ ಗ್ಯಾಂಗ್...

SHOCKING : ದೇಶದಲ್ಲಿ ಮತ್ತೊಂದು ‘ಪೈಶಾಚಿಕ ಕೃತ್ಯ’ : 5ನೇ ತರಗತಿ ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್..!

5ನೇ ತರಗತಿ ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್ ನಡೆದಿರುವ ಘಟನೆ ತ್ರಿಪುರಾದ ದಕ್ಷಿಣ ಭಾಗದ ಜಿಲ್ಲೆಯಲ್ಲಿ ನಡೆದಿದೆ.

ಶಾಲೆಯಿಂದ ಬಾಲಕಿ ಮನೆಗೆ ವಾಪಾಸ್ ಆಗುತ್ತಿದ್ದಾಗ ಈ ಘಟನೆ ನಡೆದಿದೆ. ಮಗಳು ಮನೆಗೆ ಬಂದಿಲ್ಲ ಎಂದು ಗಾಬರಿಯಾದ ಪೋಷಕರು ಹುಡುಕಾಟ ನಡೆಸಿದ್ದಾರೆ. ಆದರೂ ಮಗಳು ಪತ್ತೆಯಾಗಿಲ್ಲ. ಈ ಹಿನ್ನೆಲೆಯಲ್ಲಿ ಬೆಲೊನಿಯಾ ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಷಕರು ದೂರು ನೀಡಿದ್ದಾರೆ.

ಪ್ರಕರಣ ದಾಖಲಿಸಿಕೊಂಡ ಪೊಲೀಸರು ಹುಡುಕಾಟ ನಡೆಸಿದಾಗ ಬಾಲಕಿಯ ಮನೆಯ ಸಮೀಪವೇ ಬಾಲಕಿ ಪತ್ತೆಯಾಗಿದ್ದಾಳೆ. ಬಾಲಕಿ ಮೇಲೆ ಗ್ಯಾಂಗ್ ರೇಪ್ ನಡೆದಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಂತ್ರಸ್ತ ಬಾಲಕಿಯನ್ನು 22 ವರ್ಷದ ಯುವಕನೊಬ್ಬ ಮನೆ ಬಳಿ ಬಿಟ್ಟು ಹೋಗಿದ್ದಾನೆ ಎಂಬುದು ತಿಳಿದುಬಂದಿದೆ. ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಈವರೆಗೂ ಯಾವುದೇ ಆರೋಪಿಯನ್ನು ಬಂಧಿಸಲಾಗಿಲ್ಲ. ಸದ್ಯ ಸಂತ್ರಸ್ತ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

 

For Latest News Updates, Join Our Whatsapp Community🚩
RELATED ARTICLES

Most Popular