alex Certify BREAKING NEWS: ಮುನಿರತ್ನ ವಿರುದ್ಧ ಇನ್ನೂ ಎರಡು ಆಡಿಯೋ ಇದೆ: ಗುತ್ತಿಗೆದಾರ ಚಲುವರಾಜು ಸ್ಫೋಟಕ ಹೇಳಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಮುನಿರತ್ನ ವಿರುದ್ಧ ಇನ್ನೂ ಎರಡು ಆಡಿಯೋ ಇದೆ: ಗುತ್ತಿಗೆದಾರ ಚಲುವರಾಜು ಸ್ಫೋಟಕ ಹೇಳಿಕೆ

ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಇನ್ನೂ ಎರಡು ಆಡಿಯೋಗಳಿವೆ. ಅವುಗಳನ್ನು ನಾಳೆ ಬಿಡುಗಡೆ ಮಾಡುತ್ತೇನೆ ಎಂದು ಗುತ್ತಿಗೆದಾರ ಚಾಲುವರಾಜು ಸ್ಫೋಟಕ ಹೇಳಿಕೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ, ಮಾತನಾಡಿದ ಚಲುವರಾಜು, ಮುನಿರತ್ನ ಅವರ ಇನ್ನೂ ಎರಡು ಆಡಿಯೋ ನಾಳೆ ಬಿಡುಗಡೆ ಮಾಡುತ್ತೇನೆ. ಹನುಮಂತರಾಯಪ್ಪ ಜೊತೆ ಮಾತನಾಡಿರುವ ಆಡಿಯೋ ಹಾಗೂ 30% ಕಮಿಷನ್ ವಿಚಾರದ ಆಡಿಯೋಗಳನ್ನು ನಾಳೆ ಬಿಡುಗಡೆ ಮಾಡುತ್ತೇನೆ ಎಂದಿದ್ದಾರೆ.

ಶಾಸಕ ಮುನಿರತ್ನ ಕಳೆದ ಮೂರು ವರ್ಷಗಳಿಂದ ತನಗೆ ಕೊಡಬಾರದ ಹಿಂಸೆ ಕೊಟ್ಟಿದ್ದಾರೆ. ನನ್ನ ಪತ್ನಿಯ ಫೋಟೋ ಕಳುಹಿಸುವಂತೆ ಹಿಂಸಿಸಿದ್ದಾರೆ. ನಿಂದಿಸಿದ್ದಾರೆ. ಮುನಿರತ್ನ ಕಡೆಯವರು ರೇಣುಕಾಸ್ವಾಮಿಗೆ ಆದ ಗತಿಯೇ ನಿನಗೂ ಆಗುತ್ತೆ ಎಂದು ಹೆದರಿಸಿದ್ದಾರೆ. ರೇಣುಕಾಸ್ವಾಮಿಯನ್ನು ಹತ್ಯೆ ಮಾಡಿದ್ದು ಯಾರು ಗೊತ್ತಾ? ನಮ್ಮ ಎಂಎಲ್ ಎ ಮುನಿರತ್ನ ಭಾಮೈದ ಎಂದು ಹೆದರಿಸಿ ಧಮ್ಕಿ ಹಾಕಿದ್ದಾರೆ. ನನಗೆ ಹಾಗೂ ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದ್ದು ರಕ್ಷಣೆ ನೀಡುವಂತೆ ಚಲುವರಾಜು ಕಣ್ಣೀರಿಟ್ಟಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...