HomeKarnataka'ಗೃಹಲಕ್ಷ್ಮಿ'ಯರಿಗೆ ಭರ್ಜರಿ ಗುಡ್ ನ್ಯೂಸ್: ಖಾತೆಗೆ ಎರಡು ತಿಂಗಳ ಹಣ ಒಟ್ಟಿಗೆ ಜಮಾ

‘ಗೃಹಲಕ್ಷ್ಮಿ’ಯರಿಗೆ ಭರ್ಜರಿ ಗುಡ್ ನ್ಯೂಸ್: ಖಾತೆಗೆ ಎರಡು ತಿಂಗಳ ಹಣ ಒಟ್ಟಿಗೆ ಜಮಾ

ಬೆಂಗಳೂರು: ಗೃಹಲಕ್ಷ್ಮಿ ಯೋಜನೆ ಫಲಾನುಭವಿ ಮಹಿಳೆಯರ ಖಾತೆಗೆ ಎರಡು ತಿಂಗಳ ಬಾಕಿ ಹಣವನ್ನು ಒಂದೇ ಬಾರಿ ಜಮಾ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹಿಳೆಯರಿಗೆ ಪ್ರತಿ ತಿಂಗಳು 2000 ರೂ. ಪಾವತಿ ಮಾಡುವ ಗೃಹಲಕ್ಷ್ಮಿ ಯೋಜನೆ ಎಂದಿಗೂ ನಿಲ್ಲುವುದಿಲ್ಲ. ಇದು ನಿತ್ಯ, ನಿರಂತರವಾಗಿದೆ. ಬಾಕಿ ಇರುವ ಎರಡು ತಿಂಗಳ ಹಣವನ್ನು ಒಂದೇ ಬಾರಿಗೆ ಖಾತೆಗೆ ಜಮಾ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಲಿಂಗತ್ವ ಅಲ್ಪಸಂಖ್ಯಾತರಿಗೆ ಮೂರು ತಿಂಗಳ ಹಿಂದೆಯಷ್ಟೇ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಿದ್ದು, ಅವರಿಗೂ ಕೂಡ ಒಟ್ಟಿಗೆ ಹಣ ಪಾವತಿಯಾಗಲಿದೆ. ಗೃಹಲಕ್ಷ್ಮಿ ಯೋಜನೆ ನಿರಂತರವಾಗಿದ್ದು, ಫಲಾನುಭವಿಗಳಿಗೆ ಎರಡು ತಿಂಗಳ ಬಾಕಿ ಹಣ ಒಟ್ಟಿಗೆ ಪಾವತಿಸಲಾಗುವುದು ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular