HomeEntertainmentಸುಬ್ರಹ್ಮಣ್ಯ ಚಿತ್ರದ ಗ್ಲಿಂಪ್ಸ್ ವಿಡಿಯೋ ರಿಲೀಸ್

ಸುಬ್ರಹ್ಮಣ್ಯ ಚಿತ್ರದ ಗ್ಲಿಂಪ್ಸ್ ವಿಡಿಯೋ ರಿಲೀಸ್

ತನ್ನ ಟೈಟಲ್ ಮೂಲಕವೇ ಸಾಕಷ್ಟು ನಿರೀಕ್ಷೆ ಮೂಡಿಸಿರುವ ಪಿ ರವಿಶಂಕರ್ ನಿರ್ದೇಶನದ ಪ್ಯಾನ್ ಇಂಡಿಯಾ ಚಿತ್ರ ಸುಬ್ರಹ್ಮಣ್ಯ ಇನ್ನೇನು ಬಿಡುಗಡೆಗೆ ಸಿದ್ಧವಾಗಿದ್ದು, ಇದರ ಗ್ಲಿಂಪ್ಸ್ ವಿಡಿಯೋ sg ಮೂವೀಸ್ ಯೂಟ್ಯೂಬ್ ಚಾನೆಲ್ ನಲ್ಲಿ ರಿಲೀಸ್ ಆಗಿದೆ. ಈ ಗ್ಲಿಂಪ್ಸ್  ವಿಡಿಯೋದಲ್ಲಿ ಭಗವಾನ್ ಶ್ರೀ ರಾಮನ ದರ್ಶನವಾಗಲಿದ್ದು, ನೋಡುಗರಲ್ಲಿ ಸಾಕಷ್ಟು ಕುತೂಹಲ ಕೆರಳಿಸಿದೆ.

ಈ ಚಿತ್ರವನ್ನು ಎಸ್ ಜಿ ಮೂವೀ ಕ್ರಿಯೇಷನ್ಸ್ ಲಾಂಛನದಲ್ಲಿ ತಿರುಮಲರೆಡ್ಡಿ ಮತ್ತು ಅನಿಲ್ ಕಡಿಯಾಲ ನಿರ್ಮಾಣ ಮಾಡುತ್ತಿದ್ದು, ಆರ್ಮುಗಂ ರವಿಶಂಕರ್ ಪುತ್ರ ಅದ್ವಯ್  ಹಾಗೂ ರೂಬಲ್ ಶೇಖಾವತ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ರವಿ ಬಸ್ರೂರು ಸಂಗೀತ ಸಂಯೋಜನೆ ನೀಡಿದ್ದು, ವಿಜಯ್ ಎಂ ಕುಮಾರ್ ಸಂಕಲನ, ಮಾಸ್ತಿ ಸಂಭಾಷಣೆ ಹಾಗೂ ವಿಘ್ನೇಶ್ ರಾಜ್ ಅವರ ಛಾಯಾಗ್ರಹಣವಿದೆ.

For Latest News Updates, Join Our Whatsapp Community🚩
RELATED ARTICLES

Most Popular