ವಿಜಯನಗರ: ರಾಜ್ಯದ ಪ್ರತಿ ಜಿಲ್ಲೆಗಳ ರಸ್ತೆ ರಸ್ತೆಯಲ್ಲಿಯೂ ಬೀದಿನಾಯಿಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಮಕ್ಕಳು, ಸಾರ್ವಜನಿಕರು ಜೀವ ಭಯದಲ್ಲಿ ಓಡಾಡಬೇಕಾದ ಸ್ಥಿತಿ ಎದುರಾಗಿದೆ. ಆದಾಗ್ಯೂ ಸಂಬಂಧಪಟ್ಟ ಅಧಿಕಾರಿಗಳು ಬೀದಿ ನಾಯಿಗಳ ಹಾವಳಿಗೆ ಕಡಿವಾಣ ಹಾಕದಿರುವುದು ದುರಂತವೇ ಸರಿ.
ಮನೆಯ ಮುಂದೆ ಆಟವಾಡುತ್ತಿದ್ದ ಮಕ್ಕಳ ಮೇಲೆ ಹುಚ್ಚು ನಾಯಿ ದಾಳಿ ನದೆಸಿರುವ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಧರ್ಮಸಾಗರದಲ್ಲಿ ನಡೆದಿದೆ.
ಮನೆಯ ಅಂಗಳದಲ್ಲಿ ಆಟವಾಡುತ್ತಿದ್ದ ನಾಲ್ವರು ಮಕ್ಕಳ ಮೇಲೆ ಹುಚ್ಚು ನಾಯಿಯೊಂದು ದಾಳಿ ನಡೆಸಿ, ಮಕ್ಕಳನ್ನು ಗಾಯಗೊಳಿಸಿದೆ. ಮಕ್ಕಳ ಕೈ-ಕಾಲು, ಮುಖಗಳಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.