HomeKarnatakaಕ್ರೀಡಾಕೂಟ : ಜಯಪುರದ 'BGS PU' ಕಾಲೇಜಿನ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

ಕ್ರೀಡಾಕೂಟ : ಜಯಪುರದ ‘BGS PU’ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

ಜಯಪುರ : ಸೆಪ್ಟೆಂಬರ್ ತಿಂಗಳ 13 ಮತ್ತು14 ರಂದು ಚಿಕ್ಕಮಗಳೂರಿನಲ್ಲಿ ನಡೆದ ಪದವಿ ಪೂರ್ವ ಕಾಲೇಜುಗಳ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಬಿಜಿಎಸ್ ಜಯಪುರ ಪದವಿ ಪೂರ್ವ ಕಾಲೇಜಿನ ಕಲಾವಿ ಭಾಗದ ವಿದ್ಯಾರ್ಥಿಗಳಾದ ತೇಜಸ್ ಎ ರಾವ್ ಗುಂಡು ಎಸೆತದಲ್ಲಿ ಪ್ರಥಮ ಹಾಗು ಚಕ್ರಎಸೆತದಲ್ಲಿ ದ್ವಿತೀಯ ಸ್ಥಾನ ಪಡೆಯುವ ಮೂಲಕ ಸತತ ಎರಡನೇ ಬಾರಿಗೆ ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಹಾಗೂ ಇದೇ ಕಾಲೇಜಿನ ಸಾನಿಕ ಎಸ್ ಗುಡ್ಡಗಾಡು ಓಟದಲ್ಲಿ ಮತ್ತು ಕೀರ್ತನಾ ಹರ್ಡಲ್ಸ್ ನಲ್ಲಿ ದ್ವಿತೀಯ ಸ್ಥಾನ ಹಾಗೂ ತ್ರಿಷಾ ಜೈನ್ ಟೆನಿಕಾಯಿಟ್ ನಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಕ್ರೀಡಾಕೂಟದಲ್ಲಿ ಭಾಗವಹಿಸಿದ ಹಾಗೂ ಬಹುಮಾನಗಳನ್ನು ಗಳಿಸಿರುವ ವಿಜೇತರಿಗೆ ಪೂಜ್ಯ ಶ್ರೀ ಶ್ರೀ ಗುಣನಾಥ ಸ್ವಾಮೀಜಿಯವರು, ಕಾಲೇಜಿನ ಆಡಳಿತ ಮಂಡಳಿ, ಪ್ರಾಚಾರ್ಯರು ಕ್ರೀಡಾ ಕಾರ್ಯದರ್ಶಿ ಹಾಗೂ ಎಲ್ಲಾ ಉಪನ್ಯಾಸಕ ವೃಂದದವರು ಅಭಿನಂದಿಸಿರುತ್ತಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular