ಬೆಂಗಳೂರು : ‘HSRP’ ನಂಬರ್ ಪ್ಲೇಟ್ ಅಳವಡಿಸದವರಿಗೆ ದಂಡ ವಿಧಿಸುವ ಸಂಬಂಧ ನಾಳೆ ಹೈಕೋರ್ಟ್ ನಿಂದ ಮಹತ್ವದ ಆದೇಶ ಪ್ರಕಟವಾಗಲಿದೆ.
ರಾಜ್ಯದಲ್ಲಿ HSRP ನಂಬರ್ ಪ್ಲೇಟ್ ಅಳವಡಿಕೆ ಸಂಬಂಧ ಹೈಕೋರ್ಟ್ನಲ್ಲಿ ದಾಖಲಾಗಿರುವ ಪ್ರಕರಣ ವಿಚಾರಣೆ ಸೆ.18ರಂದು ನಡೆಯಲಿರುವ ಕಾರಣ ಕೋರ್ಟ್ ನಿರ್ದೇಶನ ನೀಡುವವರೆಗೆ ಹೈ ಸೆಕ್ಯೂರಿಟಿ ನೋಂದಣಿ ಫಲಕ ಹಾಕದವರ ವಿರುದ್ಧ ಕ್ರಮ ಕೈಗೊಳ್ಳದಿರಲು ಸಾರಿಗೆ ಇಲಾಖೆ ನಿರ್ಧರಿಸಿದೆ.ಈ ನಿಟ್ಟಿನಲ್ಲಿ ನಾಳೆಯ ಹೈಕೋರ್ಟ್ ನಿರ್ದೇಶನಕ್ಕಾಗಿ ಸರ್ಕಾರ ಕಾಯುತ್ತಿದೆ.
ಸುರಕ್ಷಿತ ನೋಂದಣಿ ಫಲಕ (ಹೆಚ್ಎಸ್ಆರ್ಪಿ) ಅಳವಡಿಕೆಗೆ ಸಂಬಂಧಿಸಿ ಹೈಕೋರ್ಟ್ನಲ್ಲಿ ಸೆಪ್ಟೆಂಬರ್ 18 ರಂದು ವಿಚಾರಣೆ ನಡೆಯಲಿದ್ದು, ಅಲ್ಲಿಯವರೆಗೆ ದಂಡ ವಿಧಿಸದಿರಲು ಸಾರಿಗೆ ಇಲಾಖೆ ನಿರ್ಧರಿಸಿದೆ.
ʼಹೆಚ್ಎಸ್ಆರ್ಪಿ ಅಳವಡಿಕೆಯ ಮೂರು ತಿಂಗಳ ಅವಧಿ ಈಗ ಮುಗಿದಿದೆ. ಸೆಪ್ಟೆಂಬರ್ 18ಕ್ಕೆ ಹೈಕೋರ್ಟ್ ನೀಡುವ ಆದೇಶ ಆಧರಿಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು. ಅಲ್ಲಿಯವರೆಗೆ ಬಲವಂತದ ಕ್ರಮ ಇರುವುದಿಲ್ಲ ಎಂದು ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.