alex Certify BREAKING NEWS: ಮರಕ್ಕೆ ಕಾರು ಡಿಕ್ಕಿ: ಒಂದೇ ಕುಟುಂಬದ ಐವರು ಸ್ಥಳದಲ್ಲೇ ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಮರಕ್ಕೆ ಕಾರು ಡಿಕ್ಕಿ: ಒಂದೇ ಕುಟುಂಬದ ಐವರು ಸ್ಥಳದಲ್ಲೇ ದುರ್ಮರಣ

ರಾಮನಗರ: ಮರಕ್ಕೆ ಕಾರು ಡಿಕ್ಕಿಹೊಡೆದ ಪರಿಣಾಮ ಒಂದೇ ಕುಟುಂಬದ ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಗುಡೆಮಾರನಹಳ್ಳಿಯಲ್ಲಿ ನಡೆದಿದೆ.

ಸಂಬಂಧಿಕರ ತಿಥಿ ಕಾರ್ಯ ಮುಗಿಸಿ ದೇವಸ್ಥಾನಕ್ಕೆ ತೆರಳುತ್ತಿದ್ದ ವೇಳೆ ಕಾರು ಮರಕ್ಕೆ ಡಿಕ್ಕಿ ಹೊಡೆದಿದೆ. ಕಾರು ಚಾಲಕ ಸೇರಿ ಐವರು ಸಾವನ್ನಪ್ಪಿದ್ದಾರೆ. ಕಾರಿನಲ್ಲಿದ್ದ ಸಾಕುನಾಯಿ ಮಾತ್ರ ಬಚಾವ್ ಆಗಿದೆ.

ಮೃತ ಐವರೂ ಕುಣಿಗಲ್ ಮೂಲದವರು ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ಪರಿಶೀಲನೆ ನಡೆಸಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...